ಶ್ಯಾಮ್ ದೇವಸ್ಥಾನದಲ್ಲಿ ಮುಂಜಾನೆ ಕಾಲ್ತುಳಿತ; ಮೂವರು ಸಾವು, ಇಬ್ಬರಿಗೆ ಗಾಯ 
ದೇಶ

ರಾಜಸ್ಥಾನದ ಖಾಟು ಶ್ಯಾಮ್ ದೇವಸ್ಥಾನದಲ್ಲಿ ಮುಂಜಾನೆ ಕಾಲ್ತುಳಿತ; ಮೂವರು ಸಾವು, ಇಬ್ಬರಿಗೆ ಗಾಯ

ರಾಜಸ್ಥಾನದ ಸಿಕಾರ್‌ ಪಟ್ಟಣದ ದೇವಾಲಯವೊಂದರಲ್ಲಿ ಇಂದು ಮುಂಜಾನೆ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಜೈಪುರ: ರಾಜಸ್ಥಾನದ ಸಿಕಾರ್‌ ಪಟ್ಟಣದ ದೇವಾಲಯವೊಂದರಲ್ಲಿ ಇಂದು ಮುಂಜಾನೆ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದ ವೇಳೆ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಖಾಟು ಶ್ಯಾಮ್‌ಜಿ ದೇವಾಲಯದಲ್ಲಿ ಮಾಸಿಕ ಜಾತ್ರೆಯ ವೇಳೆ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನು ಜೈಪುರ ಆಸ್ಪತ್ರೆಗೆ ದಾಖಲಿಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಕಾಲ್ತುಳಿತ ಸಂಭವಿಸಿದೆ ಎನ್ನಲಾಗಿದೆ. ಇಂದು ಭಗವಾನ್ ಕೃಷ್ಣನ ಅವತಾರವೆಂದು ನಂಬಲಾದ ಖಾಟು ಶ್ಯಾಮ್ ಜಿಯ ದರ್ಶನಕ್ಕೆ ಬಹಳ ಮಂಗಳಕರ ದಿನವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಮುಂಜಾನೆಯಿಂದಲೇ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

ಪೊಲೀಸರ ಪ್ರಕಾರ, ದೇವಾಲಯದ ಹೊರಗೆ ದೊಡ್ಡ ಜನಸಮೂಹ ಜಮಾಯಿಸಿ, ಗೇಟ್ ತೆರೆಯುವುದನ್ನೇ ಕಾಯುತ್ತಿದ್ದರು. ಗೇಟ್‌ಗಳು ತೆರೆಯುತ್ತಿದ್ದಂತೆ ಜನರು ಒಳಗೆ ಬರಲು ಒಬ್ಬರ ಮೇಲೆ ಒಬ್ಬರು ಬಿದ್ದು ಮುನ್ನುಗ್ಗಲು ಪ್ರಯತ್ನಿಸಿದಾಗ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಹಿಂದೆ ಇದ್ದವರು ಸಹ ಕೆಳಗೆ ಬಿದ್ದಿದ್ದಾರೆ. ಈ ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT