ನಿತೀಶ್ ಕುಮಾರ್ 
ದೇಶ

ಬಿಹಾರ: ಅನಿಶ್ಚಿತತೆಯಲ್ಲಿ ಎನ್‌ಡಿಎ ಭವಿಷ್ಯ; ಜೆಡಿಯು ಸಭೆಗೂ ಮುನ್ನ ಬಿಜೆಪಿ ಎಚ್ಚರಿಕೆಯ ಹೆಜ್ಜೆ

ಬಿಜೆಪಿಯೊಂದಿಗೆ ಜೆಡಿಯು ಸಂಬಂಧ ಹದಗೆಟ್ಟಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪಕ್ಷದ ಸಂಸದರು ಮತ್ತು ಶಾಸಕರ ಸಭೆ ಕರೆದಿದ್ದಾರೆ. ಈ ಮಧ್ಯೆ ಬಿಹಾರದಲ್ಲಿ ಮೈತ್ರಿ ಧರ್ಮ ಪಾಲಿಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. 

ನವದೆಹಲಿ: ಬಿಜೆಪಿಯೊಂದಿಗೆ ಜೆಡಿಯು ಸಂಬಂಧ ಹದಗೆಟ್ಟಿರುವಂತೆಯೇ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಂಗಳವಾರ ಪಕ್ಷದ ಸಂಸದರು ಮತ್ತು ಶಾಸಕರ ಸಭೆ ಕರೆದಿದ್ದಾರೆ. ಈ ಮಧ್ಯೆ ಬಿಹಾರದಲ್ಲಿ ಮೈತ್ರಿ ಧರ್ಮ ಪಾಲಿಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ. 

ಜೆಡಿಯು ಮೈತ್ರಿಯನ್ನು ಮರುಪರಿಶೀಲಿಸುತ್ತಿದೆ ಎಂಬ ಊಹಾಪೋಹಗಳ ಮಧ್ಯೆ  ಬಿಹಾರ ಮುಖ್ಯಮಂತ್ರಿಯ ನಿಕಟವರ್ತಿಯಾಗಿದ್ದ ಆರ್ ಸಿಪಿ ಸಿಂಗ್, ಕುಮಾರ್ ಮತ್ತು ಚಿರಾಗ್ ಪಾಸ್ವಾನ್ ಅವರ ರಾಜಕೀಯ ಭವಿಷ್ಯ ಪತನಕ್ಕೆ ಸಂಬಂಧಿಸಿದಂತೆ  ಮಿತ್ರಪಕ್ಷದ ಆರೋಪದ ಬಗ್ಗೆ ಹಿರಿಯ ಬಿಜೆಪಿ ನಾಯಕರು ಮೌನವನ್ನು ವಹಿಸಿದ್ದಾರೆ. ಕುಮಾರ್ ಏನು ಮಾಡುತ್ತಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟ, ನಾವು ಕಾದು ನೋಡುತ್ತೇವೆ ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು.

2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ವಿರುದ್ಧ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪಾಸ್ವಾನ್ ಅವರ ನಿರ್ಧಾರವು ಅದರ ನಿರೀಕ್ಷೆಯನ್ನು ಭಾರಿ ಪ್ರಮಾಣದಲ್ಲಿ ಕೆಡಿಸಿತು ಮತ್ತು ಅದರ ಅಧ್ಯಕ್ಷ ಲಾಲನ್ ಸಿಂಗ್ ಅವರು ಭಾನುವಾರ ಇದು ದೊಡ್ಡ ಪಿತೂರಿಯ ಭಾಗವಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಸಿಪಿ ಸಿಂಗ್‌ಗೆ ಸಂಬಂಧಿಸಿದ ಬೆಳವಣಿಗೆಯು  ಚಿರಾಗ್ ಮಾದರಿ ಆಧಾರಿತ ಮತ್ತೊಂದು ಪ್ರಯತ್ನವಾಗಿದೆ ಎಂದು ಅವರು ಯಾವುದೇ ಪಕ್ಷವನ್ನು ಹೆಸರಿಸದೆ ಹೇಳಿದ್ದಾರೆ.

2024 ಮತ್ತು 2025ರಲ್ಲಿ ನಡೆಯಲಿರುವ ಮುಂದಿನ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಜೆಡಿ(ಯು) ಜೊತೆಗಿನ ಮೈತ್ರಿ ಮುಂದುವರಿಯಲಿದೆ ಎಂದು ಗೃಹ ಸಚಿವ ಅಮಿತ್ ಶಾ ಅವರು ಇತ್ತೀಚೆಗೆ ಪಾಟ್ನಾಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ನಾಯಕರಿಗೆ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಅದರ ನಂತರ ಜೆಡಿಯು ದೂರು ನೀಡಲು ಯಾವುದೇ ಕಾರಣಗಳನ್ನು ಹೊಂದಿರಬಾರದು ಎಂದು ಬಿಜೆಪಿ ನಾಯಕರೊಬ್ಬರು ಹೇಳಿದರು. ಆದಾಗ್ಯೂ, ಕೇಂದ್ರ ಸಚಿವ ಸಂಪುಟದಲ್ಲಿ ಮೂರು ಸ್ಥಾನ ನೀಡುವಲ್ಲಿ ಬಿಜೆಪಿ ನಿರ್ಲಕ್ಷ್ಯ ಬಗ್ಗೆ ಜೆಡಿಯು ಕೂಡ ಅಸಮಾಧಾನ ವ್ಯಕ್ತಪಡಿಸುತ್ತಿದೆ.

ಕೇಸರಿ ಪಕ್ಷದ ಸೈದ್ಧಾಂತಿಕ ಅಜೆಂಡಾ ಜೊತೆಗೆ ಆಗಾಗ್ಗೆ ಕುಮಾರ್ ಅವರ ಆಡಳಿತವನ್ನು ಪ್ರಶ್ನಿಸುವ ಬಿಹಾರ ಬಿಜೆಪಿ ನಾಯಕರ ಹೇಳಿಕೆಗಳು ಜೆಡಿಯು ನಿಲುವಿಗೆ ಹೊಂದಿಕೆಯಾಗುವುದಿಲ್ಲ ಎಂದು ಪರಿಗಣಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?