ನಿತೀಶ್ ಕುಮಾರ್, ತೇಜಸ್ವಿ ಯಾದವ್ 
ದೇಶ

ಬಿಹಾರ: ಬಿಜೆಪಿ ಸಖ್ಯ ತೊರೆದು ನಿತೀಶ್ ಕುಮಾರ್ ಆರ್‌ಜೆಡಿಯೊಂದಿಗೆ ಮೈತ್ರಿ? ಮಂಗಳವಾರ ನಿರ್ಧಾರ ಪ್ರಕಟ

ಬಿಹಾರದಲ್ಲಿ ಜೆಡಿಯು ಬಿಜೆಪಿ ಜೊತೆಗಿನ ಸಖ್ಯ ತೊರೆಯುವ  ಕುರಿತು ಚರ್ಚೆಗಳು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್  ಮಂಗಳವಾರ ಜೆಡಿಯು ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.  

ಪಾಟ್ನಾ: ಬಿಹಾರದಲ್ಲಿ ಜೆಡಿಯು ಬಿಜೆಪಿ ಜೊತೆಗಿನ ಸಖ್ಯ ತೊರೆಯುವ  ಕುರಿತು ಚರ್ಚೆಗಳು ಹೆಚ್ಚುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್  ಮಂಗಳವಾರ ಜೆಡಿಯು ಸಂಸದರು, ಶಾಸಕರು ಮತ್ತು ಎಂಎಲ್‌ಸಿಗಳೊಂದಿಗೆ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.  

ಪಕ್ಷದ ನಾಯಕರೊಂದಿಗಿನ ನಿತೀಶ್ ಅವರ ಸಭೆಯು ಹೆಚ್ಚು ಮಹತ್ವದ್ದಾಗಿದೆ ಎಂದು ಪರಿಗಣಿಸಲಾಗಿದೆ. ಸಭೆಯಿಂದ ಏನಾದರೂ ನಿರ್ಧಾರ ಹೊರಬೀಳಬಹುದು ಎನ್ನಲಾಗುತ್ತಿದೆ. ಮಾಜಿ ಕೇಂದ್ರ ಸಚಿವ ಆರ್‌ಸಿಪಿ ಸಿಂಗ್ ವಿರುದ್ಧದ ಭ್ರಷ್ಟಾಚಾರ ಆರೋಪ ಮತ್ತು ನಂತರ ಪಕ್ಷಕ್ಕೆ ರಾಜೀನಾಮೆ ನೀಡಿದ ಬಗ್ಗೆ ಚರ್ಚಿಸಲು ಪಕ್ಷವು ಸಭೆಯನ್ನು ಕರೆದಿದೆ ಎಂದು ಜೆಡಿಯು ನಾಯಕರು ಹೇಳುತ್ತಾರೆ. ಆದರೆ ನಿತೀಶ್ ಅವರು ಮತ್ತೆ ಎನ್‌ಡಿಎ ತೊರೆಯಲು ಯೋಜಿಸುತ್ತಿದ್ದಾರೆ ಎಂಬ ಊಹಾಪೋಹವನ್ನುಅವರು ಒಪ್ಪಿಕೊಳ್ಳಲಿಲ್ಲ.

ಜೆಡಿಯುನಲ್ಲಿ ಕೆಲವು ಸಮಸ್ಯೆಗಳಿದ್ದು, ಸಭೆಯಲ್ಲಿ ಚರ್ಚಿಸಲಾಗುವುದು, ಈ ವಿಷಯಗಳ ರಾಜಕೀಯ ಪರಿಣಾಮಗಳನ್ನು ವಿಶ್ಲೇಷಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜೆಡಿಯು ಹಿರಿಯ ಸಚಿವ ವಿಜಯ್ ಕುಮಾರ್ ಚೌಧರಿ ಸೋಮವಾರ ಹೇಳಿದ್ದಾರೆ.

ಬಿಹಾರದ ಪ್ರಮುಖ ವಿರೋಧ ಪಕ್ಷ ಆರ್‌ಜೆಡಿ ಮಂಗಳವಾರ ತನ್ನ ಪಕ್ಷದ ಶಾಸಕರ ಸಭೆ ನಡೆಸಲಿದೆ. ಜೆಡಿಯು ಸಭೆಯು ನಿತೀಶ್ ಅವರ ಮುಂದಿನ ನಡೆ ಕುರಿತು ಹಲವು ಅನುಮಾನಗಳನ್ನು ನಿವಾರಿಸುವ ಸಾಧ್ಯತೆಯಿದ್ದರೆ, ಆರ್‌ಜೆಡಿ ಸಭೆಗೂ ಹೆಚ್ಚಿನ ಮಹತ್ವವಿದೆ. ನಿತೀಶ್ ಕುಮಾರ್ ಒಂದು ವೇಳೆ ಬಿಜೆಪಿ ಸಖ್ಯ ತೊರೆಯುವುದಾದರೆ ತಮ್ಮ ಪಕ್ಷ ಅವರನ್ನು ಸ್ವಾಗತಿಸಲಿದೆ ಎಂದು  ಬಿಹಾರ ಆರ್‌ಜೆಡಿ ಅಧ್ಯಕ್ಷ ಜಗದಾನಂದ್ ಸಿಂಗ್  ಹೇಳುವ ಮೂಲಕ ನಡೆಯುತ್ತಿರುವ ರಾಜಕೀಯ ಅನಿಶ್ಚಿತತೆಗೆ ಮತ್ತಷ್ಟು ಕುತೂಹಲವನ್ನು ಹೆಚ್ಚಿಸಿದ್ದಾರೆ. 

ರಾಜ್ಯದಲ್ಲಿ ಮುಂದಿನ ಸರ್ಕಾರ ರಚನೆಯಲ್ಲಿ ಜೆಡಿಯುಗೆ ಆರ್‌ಜೆಡಿ ಹೊರಗಿನ ಬೆಂಬಲವನ್ನು ನೀಡಬಹುದು ಎಂಬ ಊಹಾಪೋಹವಿದೆ. ಮಂಗಳವಾರ ನಡೆಯಲಿರುವ ಆರ್‌ಜೆಡಿ ಸಭೆಯು ತೇಜಸ್ವಿ ಯಾದವ್‌ಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡುವುದನ್ನು ಪಕ್ಷವು ಒಪ್ಪಿಕೊಳ್ಳುತ್ತದೆಯೇ ಅಥವಾ ಅವರಿಗೆ ಸಿಎಂ ಸ್ಥಾನಕ್ಕಾಗಿ ಒತ್ತಾಯಿಸುತ್ತದೆಯೇ ಎಂಬುದು ಪ್ರಮುಖವಾಗಿದೆ.

ಈ ಮಧ್ಯೆ  ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿರ್ಧಾರಗಳನ್ನು ತಮ್ಮ ಪಕ್ಷ ಬೆಂಬಲಿಸುತ್ತದೆ ಎಂದು ಹಿಂದೂಸ್ತಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಮತ್ತು ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT