ಪ್ರಾತಿನಿಧಿಕ ಚಿತ್ರ 
ದೇಶ

ವಾಟರ್‌ ಬಾಟಲ್‌ಗಾಗಿ ವಾಗ್ವಾದ: ವ್ಯಕ್ತಿಗೆ ಥಳಿಸಿ, ಚಲಿಸುವ ರೈಲಿನಿಂದ ಹೊರಗೆ ನೂಕಿದ ಪ್ಯಾಂಟ್ರಿ ಸಿಬ್ಬಂದಿ!

ಉತ್ತರ ಪ್ರದೇಶದ ಝಾನ್ಸಿಯ ಲಲಿತ್‌ಪುರ ಜಿಲ್ಲೆಯಲ್ಲಿ ರೈಲ್ವೇ ಪ್ಯಾಂಟ್ರಿ ಸಿಬ್ಬಂದಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆದಿರುವ ಘಟನೆ ನಡೆದಿದೆ. ಈ ಪೈಕಿ ಒಬ್ಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿಯ ಲಲಿತ್‌ಪುರ ಜಿಲ್ಲೆಯಲ್ಲಿ ರೈಲ್ವೇ ಪ್ಯಾಂಟ್ರಿ ಸಿಬ್ಬಂದಿ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ, ಚಲಿಸುತ್ತಿದ್ದ ರೈಲಿನಿಂದ ಹೊರಕ್ಕೆ ಎಸೆದಿರುವ ಘಟನೆ ನಡೆದಿದೆ. ಈ ಪೈಕಿ ಒಬ್ಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

26 ವರ್ಷದ ರವಿ ಯಾದವ್ ಎಂಬಾತ ತನ್ನ ಸೋದರಿಯೊಂದಿಗೆ ರಪ್ತಿಸಾಗರ್ ಎಕ್ಸ್‌ಪ್ರೆಸ್(12591) ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ರೈಲು ಜಿರೋಲಿ ಗ್ರಾಮದ ಬಳಿ ತಲುಪಿದಾಗ, ನೀರಿನ ಬಾಟಲಿಯನ್ನು ಖರೀದಿಸುವ ಮತ್ತು ಪಾನ್ ಮಸಾಲವನ್ನು ಉಗುಳುವ ಬಗ್ಗೆ ಆತನ ಮತ್ತು ಪ್ಯಾಂಟ್ರಿ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆನ್ನಲ್ಲೇ ರವಿ ಯಾದವ್ ಅವರ ಸೋದರಿ ಲಲಿತ್‌ಪುರ ನಿಲ್ದಾಣದಲ್ಲಿ ರೈಲಿನಿಂದ ಇಳಿದರೂ, ಪ್ಯಾಂಟ್ರಿ ಸಿಬ್ಬಂದಿ ರವಿ ಅವರನ್ನು ಇಳಿಯಲು ಬಿಟ್ಟಿಲ್ಲ. ನಂತರ, ಅವರು ಆತನನ್ನು ಥಳಿಸಿ, ಚಲಿಸುತ್ತಿದ್ದ ರೈಲಿನಿಂದ ಮತ್ತೊಂದು ಟ್ರ್ಯಾಕ್‌ಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದ್ದು. ಅಲ್ಲಿಂದ ಸ್ಥಳೀಯರು ರವಿ ಯಾದವ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಅಲ್ಲಿಂದ ಆತನನ್ನು ಝಾನ್ಸಿ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರವಿ ಯಾದವ್ ಅವರ ದೂರಿನ ಮೇರೆಗೆ ಪ್ಯಾಂಟ್ರಿ ಸಿಬ್ಬಂದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಉದ್ದೇಶಪೂರ್ವಕವಾಗಿ ನೋವುಂಟು ಮಾಡುವುದು), 325 (ಘೋರವಾದ ಗಾಯವನ್ನುಂಟು ಮಾಡುವುದು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ ಸರ್ಕಲ್ ಅಧಿಕಾರಿ ಮೊಹಮ್ಮದ್ ನಯೀಮ್ ತಿಳಿಸಿದ್ದಾರೆ.

ಬಂಧಿನನ್ನು ಅಮಿತ್ ಎಂದು ಗುರುತಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT