ಸಂಜಯ್ ರಾವುತ್ 
ದೇಶ

ಮನೆಯಿಂದ ಊಟ, ಔಷಧಿಗೆ ಒಪ್ಪಿಗೆ; ಹಾಸಿಗೆಗೆ ನೋ ಎಂದ ನ್ಯಾಯಾಲಯ: 14 ದಿನಗಳ ನ್ಯಾಯಾಂಗ ಬಂಧನಕ್ಕೆ ಸಂಜಯ್ ರಾವುತ್‌

ಮುಂಬೈನ 'ಪತ್ರಾ ಚಾಲ್' ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮುಂಬೈ: ಮುಂಬೈನ 'ಪತ್ರಾ ಚಾಲ್' ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶಿವಸೇನಾ ಸಂಸದ ಸಂಜಯ್ ರಾವುತ್ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಮನೆಯ ಆಹಾರ ಮತ್ತು ಔಷಧಿಗಳಿಗಾಗಿ ರಾವುತ್ ಮಾಡಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಮನೆಯಿಂದಲೇ ಹಾಸಿಗೆ ಒದಗಿಸುವಂತೆ ಕೇಳಿದ್ದ ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದೆ. ಜೈಲು ಕೈಪಿಡಿಯ ನಿಯಮದಂತೆ ಜೈಲು ಅಧಿಕಾರಿಗಳು ಸಾಕಷ್ಟು ಹಾಸಿಗೆ ವ್ಯವಸ್ಥೆ ಮಾಡುತ್ತಾರೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಗೋರೆಗಾಂವ್‌ನ ಉಪನಗರದಲ್ಲಿರುವ ಪತ್ರಾ ಚಾಲ್ (ಸಾಲು ವಠಾರ) ಮರುಅಭಿವೃದ್ಧಿಯಲ್ಲಿ ನಡೆದಿರುವ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ 60 ವರ್ಷದ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿತ್ತು. ಇಂದು ಇ.ಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ ಅವರ ಮುಂದೆ ಹಾಜರುಪಡಿಸಲಾಯಿತು.

ಫೆಡರಲ್ ತನಿಖಾ ಸಂಸ್ಥೆಯು ಸಂಜಯ್ ರಾವುತ್ ಅವರ ಕಸ್ಟಡಿಯನ್ನು ಮತ್ತಷ್ಟು ವಿಸ್ತರಿಸಲು ಬಯಸಲಿಲ್ಲ. ಹೀಗಾಗಿ ನ್ಯಾಯಾಧೀಶರು ರಾವುತ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಪತ್ರಾ ಚಾಲ್‌ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾಗಿದೆ. ಮುಂಬೈನ ಹೌಸಿಂಗ್ ಡೆವಲಪ್‌ಮೆಂಟ್ ಯೋಜನೆಯಲ್ಲಿ ನಡೆದಿರುವ ಅವ್ಯವಹಾರದಿಂದ ಸಂಜಯ ರಾವುತ್ ಹಾಗೂ ಅವರ ಕುಟುಂಬಕ್ಕೆ ₹1.06 ಕೋಟಿ ಸಿಕ್ಕಿದೆ ಎಂದು ಇ.ಡಿ ಆರೋಪಿಸಿದೆ. ಈ ವಿಚಾರವಾಗಿ ಸಂಜಯ್ ರಾವುತ್ ಅವರನ್ನು ಬಂಧಿಸಿರುವ ಇ.ಡಿ ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT