ಯೋಗಿ ಆದಿತ್ಯಾನಾಥ್ 
ದೇಶ

ತುರ್ತು ವಾಟ್ಸಾಪ್ ಸಹಾಯವಾಣಿಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿಗೆ ಜೀವ ಬೆದರಿಕೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶವೊಂದು ರಾಜ್ಯ ಪೊಲೀಸರ ಪಠ್ಯ ಸಹಾಯವಾಣಿಗೆ ಬಂದಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ವಾಟ್ಸಾಪ್ ಸಂದೇಶವೊಂದು ರಾಜ್ಯ ಪೊಲೀಸರ ಪಠ್ಯ ಸಹಾಯವಾಣಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮಂಗಳವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಯಲ್-112 ಸಹಾಯವಾಣಿಯ ವಾಟ್ಸಾಪ್ ಸಂಖ್ಯೆಗೆ ಶಾಹಿದ್ ಎಂಬ ವ್ಯಕ್ತಿಯಿಂದ ಸಂದೇಶ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವ್ಯಕ್ತಿಗೆ ಮುಖ್ಯಮಂತ್ರಿ ಯೋಗಿ ಅವರಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಇಲ್ಲಿನ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಸ್ಟೇಷನ್ ಕಮಾಂಡರ್ ಸುಭಾಷ್ ಕುಮಾರ್ ಸೋಮವಾರ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಯ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಸೈಬರ್ ಸೆಲ್ ಮತ್ತು ಕಣ್ಗಾವಲು ತಂಡಗಳು ಸಹ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಭದ್ರಕೋಟೆ ಮುರಿಯಲು BJP-JDS ರಣತಂತ್ರ; HDK ನೇತೃತ್ವದಲ್ಲಿ ಮಹತ್ವದ ಸಭೆ..!

ಮಲೆನಾಡು, ಕರಾವಳಿ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಆದ್ಯತೆ: ಕೇಂದ್ರ ಸಚಿವ ವಿ. ಸೋಮಣ್ಣ