ವಿದಾಯ ಭಾಷಣ ಮಾಡಿದ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು 
ದೇಶ

'ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೂ ಮಾತನಾಡಲು ಬಿಡಿ, ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ರೋಗಿಗಳಾಗಿಬಿಡುತ್ತೀರಿ': ನಿರ್ಗಮಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.

ನವದೆಹಲಿ: ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.

ನಿನ್ನೆ ಸಂಸತ್ತು ಭವನದಲ್ಲಿ ಎಂ ವೆಂಕಯ್ಯ ನಾಯ್ಡು ಅವರಿಗೆ ವಿದಾಯ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಅದರಲ್ಲಿ ಮಾತನಾಡಿದ ಅವರು, ರಾಜಕೀಯ ಜೀವನದಲ್ಲಿ ತಾಳ್ಮೆ ಬೇಕು, ಸರ್ಕಾರವನ್ನು, ಆಡಳಿತವನ್ನು, ದೇಶವನ್ನು ಆಳುವವರನ್ನು ಬದಲಾಯಿಸಬೇಕೆಂದು ಬಯಸುವವರು ಜನರ ಬಳಿಗೆ ಹೋಗಿ ಅದನ್ನು ಸಾಧಿಸಿಕೊಳ್ಳಬೇಕು ಎಂದರು.

ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ನೀವು ರೋಗಿಗಳಾಗಿಬಿಡುತ್ತೀರಿ ಎಂದರು. ಇದೇ ಸಂದರ್ಭದಲ್ಲಿ ಸರ್ಕಾರಕ್ಕೆ ಸಲಹೆ ನೀಡಿದ ಅವರು, ನೀವು ಸದನದಲ್ಲಿ ಬಹುಮತ ಹೊಂದಿದ್ದರೂ ಕೂಡ ವಿರೋಧ ಪಕ್ಷಗಳಿಗೆ ಗೌರವ ಕೊಡಬೇಕು. ವಿರೋಧ ಪಕ್ಷಗಳು ಕೂಡ ಮಾತನಾಡಲಿ, ನಂತರ ಸರ್ಕಾರಕ್ಕೆ ಮಾತನಾಡಲು ಅವಕಾಶ ಸುಲಭವಾಗಿ ಸಿಗುತ್ತದೆ, ಏಕೆಂದರೆ ಅದಕ್ಕೆ ಬಹುಮತವಿದೆ, ಇದು ನನ್ನ ಸಲಹೆ ಎಂದರು.

ಇನ್ನು ಬಿಜೆಪಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಉಪ ಪ್ರಧಾನಿ ಎಲ್ ಕೆ ಅಡ್ವಾಣಿಯವರೊಂದಿಗೆ ತಮ್ಮ ಒಡನಾಟವನ್ನು ನೆನಪು ಮಾಡಿಕೊಂಡ ಅವರು ಇವರಿಬ್ಬರನ್ನೂ ನಾನು ದೇವರಿಗಿಂತ ನಂತರದವರು ಎಂದು ಭಾವಿಸುತ್ತೇನೆ ಎಂದರು.

ತಾವು ರೈತ ಕುಟುಂಬ ಹಿನ್ನೆಲೆಯಿಂದ ಬಂದವನಾಗಿದ್ದು ಶಾಲೆಗೆ ಹೋಗಲು ಕಿಲೋ ಮೀಟರ್ ಗಟ್ಟಲೆ ನಡೆಯಬೇಕಾಗಿತ್ತು ಎಂದು ತಮ್ಮ ಬಾಲ್ಯದ ಜೀವನವನ್ನು ಕೂಡ ನೆನಪು ಮಾಡಿಕೊಂಡರು.

ಇನ್ನು ತಮಗೆ ಜನರಿಂದ ಸಿಗುವ ಅಭಿಪ್ರಾಯ, ಸಲಹೆಗಳನ್ನು ಪ್ರಧಾನ ಮಂತ್ರಿಗಳಿಗೆ ವರ್ಗಾಯಿಸುವುದಾಗಿ ಹೇಳಿದ ವೆಂಕಯ್ಯ ನಾಯ್ಡು, ಶಿಷ್ಟಾಚಾರಗಳನ್ನು ಮುರಿಯಲು ಸಾಧ್ಯವಿಲ್ಲ. ಪ್ರಧಾನಿಯವರಿಗೆ ವಿಷಯ ತಲುಪಿಸುವುದು ತಮ್ಮ ಕೆಲಸವಷ್ಟೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT