ಭದ್ರತಾ ಪಡೆಗಳ ಕಾರ್ಯಾಚರಣೆಯ ಚಿತ್ರ 
ದೇಶ

ಸ್ವಾತಂತ್ರ್ಯ ದಿನಾಚರಣೆಗೂ 4 ದಿನ ಮುನ್ನ ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ನಾಲ್ವರು ಯೋಧರು ಹುತಾತ್ಮ

ಕೇಂದ್ರಾಡಳಿತ ಪ್ರದೇಶದ  ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ  ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶದ  ರಜೌರಿ ಜಿಲ್ಲೆಯಲ್ಲಿ ಉಗ್ರರು ಸೇನಾ ಶಿಬಿರದ ಮೇಲೆ ನಡೆಸಿದ ದಾಳಿಯಲ್ಲಿ  ನಾಲ್ವರು ಯೋಧರು ಹುತಾತ್ಮರಾಗಿದ್ದು, ಇಬ್ಬರು ದಾಳಿಕೋರರನ್ನು ಹೊಡೆದುರುಳಿಸಲಾಗಿದೆ. ಇವರಿಬ್ಬರೂ ಪಾಕಿಸ್ತಾನ ಮೂಲದ ಜೈಷ್ -ಇ- ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

ಮಾರಣಾಂತಿಕ 'ಸ್ಟೀಲ್ ಕೋರ್' ಬುಲೆಟ್‌ಗಳೊಂದಿಗೆ ಶಸ್ತ್ರ ಸಜ್ಜಿತರಾಗಿದ್ದ ಇವರನ್ನು ನಾಲ್ಕು  ಗಂಟೆಗಳ ನಂತರ ನಡೆದ ಗುಂಡಿನ ಕಾದಾಟದ ನಂತರ ಶೂಟೌಟ್ ಮಾಡಲಾಗಿದೆ. ಗುರುವಾರ ಮುಂಜಾನೆ 2 ಗಂಟೆಗೆ ಆರಂಭವಾದ ಗುಂಡಿನ ಕಾಳಗ ಬೆಳಗ್ಗೆ 6-30ಕ್ಕೆ ಮುಗಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು 75ನೇ ಸ್ವಾತಂತ್ರ್ಯೋತ್ಸವಕ್ಕೆ ನಾಲ್ಕು ದಿನ ಬಾಕಿಯಿರುವಂತೆಯೇ ಉಗ್ರರ ಈ ದಾಳಿ ನಡೆದಿದೆ.

ಸೇನಾಶಿಬಿರದೊಳಗೆ ನುಗ್ಗಲು ಪ್ರಯತ್ನಿಸಿದ ನಿಷೇಧಿತ ಜೈಷ್ ಇ ಮೊಹಮ್ಮದ್ ಸಂಘಟನೆ ಇಬ್ಬರು ಆತ್ಮಾಹತ್ಯಾ ದಾಳಿಕೋರರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಕಾಳಗದಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಆರು ಯೋಧರು ಗಾಯಗೊಡಿದ್ದರು. ಅವರಲ್ಲಿ ಮೂವರು ಆತ್ಮಾಹತ್ಯಾ ದಾಳಿಕೋರರನ್ನು ಹಿಮ್ಮೆಟ್ಟಿಸುವಾಗ ಮೃತಪಟ್ಟರೆ, ಓರ್ವ ಯೋಧ ತದನಂತರ ಸಾವನ್ನಪ್ಪಿದರು ಎಂದು ಜಮ್ಮುವಿನ ರಕ್ಷಣಾ ವಕ್ತಾರ ಲೆಫ್ಟಿನೆಂಟ್ ಕರ್ನಲ್ ದೇವೇಂದರ್ ಆನಂದ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel