ಐಟಿ ದಾಳಿ 
ದೇಶ

ಬೃಹತ್ ಐಟಿ ದಾಳಿ; 56 ಕೋಟಿ ರೂ. ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ರೂ. ಮೌಲ್ಯದ ವಜ್ರ ಸೇರಿ 390 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!

ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು “ಬೇನಾಮಿ” ಆಸ್ತಿ ಅಥವಾ “ಲೆಕ್ಕ ರಹಿತ” ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಶಪಡಿಸಿಕೊಂಡ ಸ್ವತ್ತುಗಳಲ್ಲಿ 56 ಕೋಟಿ ರೂ ನಗದು ಮತ್ತು 14 ಕೋಟಿ ರೂ ಮೌಲ್ಯದ 32 ಕೆಜಿ ಚಿನ್ನ, ಮುತ್ತುಗಳು ಮತ್ತು ವಜ್ರಗಳು ಸೇರಿವೆ. ದಾಳಿಯ ವೇಳೆ ಅಧಿಕಾರಿಗಳು ಕೆಲವು ಆಸ್ತಿ ದಾಖಲೆಗಳು ಮತ್ತು ಡಿಜಿಟಲ್ ಡೇಟಾವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಎರಡು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ವಸತಿ ಮತ್ತು ಅಧಿಕೃತ ಆವರಣದಲ್ಲಿ ಆಗಸ್ಟ್ 1 ಮತ್ತು 8 ರ ನಡುವೆ ದಾಳಿಗಳನ್ನು ನಡೆಸಲಾಗಿತ್ತು. ಇದೀಗ ಈ ದಾಳಿಯಲ್ಲಿ ವಶಕ್ಕೆ ಪಡೆಯಲಾದ ಸ್ವತ್ತುಗಳ ದತ್ತಾಂಶವನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ದಾಳಿಯ ವೇಳೆ ವಶಪಡಿಸಿಕೊಂಡ ನಗದನ್ನು ನಿಖರವಾಗಿ ಲೆಕ್ಕ ಹಾಕಲು ಅಧಿಕಾರಿಗಳಿಗೆ ಸುಮಾರು 13 ಗಂಟೆಗಳು ಬೇಕಾಯಿತು ಎನ್ನಲಾಗಿದೆ.

ಈ ವ್ಯಾಪಾರ ಗುಂಪುಗಳಿಂದ ಆಪಾದಿತ ತೆರಿಗೆ ವಂಚನೆಯ ಬಗ್ಗೆ ಮಾಹಿತಿ ಪಡೆದ ನಂತರ, ಆದಾಯ ತೆರಿಗೆ ಇಲಾಖೆಯು ಶೋಧ ಕಾರ್ಯಾಚರಣೆಗಾಗಿ ರಾಜ್ಯದಾದ್ಯಂತ 260 ಅಧಿಕಾರಿಗಳನ್ನು ಒಳಗೊಂಡ ಐದು ತಂಡಗಳನ್ನು ರಚಿಸಿತ್ತು. ಕಾರ್ಯಾಚರಣೆಯಲ್ಲಿ 120 ಕ್ಕೂ ಹೆಚ್ಚು ವಾಹನಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT