ಸಂಗ್ರಹ ಚಿತ್ರ 
ದೇಶ

ಅತ್ಯುತ್ತಮ ತನಿಖೆ: 151 ಪೊಲೀಸ್ ಸಿಬ್ಬಂದಿಗೆ ಕೇಂದ್ರ ಸರ್ಕಾರದಿಂದ ಪದಕ

2022 ರಲ್ಲಿ ಅತ್ಯುತ್ತಮ ತನಿಖೆ ನಿರ್ವಹಿಸಿದ ದೇಶದ ವಿವಿಧ ರಾಜ್ಯಗಳ 151 ಪೊಲೀಸ್ ಸಿಬ್ಬಂದಿಗೆ ಶುಕ್ರವಾರ ಕೇಂದ್ರ ಗೃಹ ಸಚಿವರ ಪದಕ ಘೋಷಣೆ ಮಾಡಲಾಗಿದೆ.

ನವದೆಹಲಿ: 2022 ರಲ್ಲಿ ಅತ್ಯುತ್ತಮ ತನಿಖೆ ನಿರ್ವಹಿಸಿದ ದೇಶದ ವಿವಿಧ ರಾಜ್ಯಗಳ 151 ಪೊಲೀಸ್ ಸಿಬ್ಬಂದಿಗೆ ಶುಕ್ರವಾರ ಕೇಂದ್ರ ಗೃಹ ಸಚಿವರ ಪದಕ ಘೋಷಣೆ ಮಾಡಲಾಗಿದೆ.

ಪ್ರಶಸ್ತಿ ಪಡೆದವರಲ್ಲಿ ಕೇಂದ್ರೀಯ ತನಿಖಾ ದಳದಿಂದ (ಸಿಬಿಐ) 15, ಮಹಾರಾಷ್ಟ್ರ ಪೊಲೀಸ್ ಇಲಾಖೆಯ 11, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ತಲಾ 10, ಕೇರಳ ಪೊಲೀಸ್, ರಾಜಸ್ಥಾನ ಪೊಲೀಸ್ ಮತ್ತು ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ತಲಾ ಎಂಟು ಅಧಿಕಾರಿಗಳು ಪದಕ ಪುರಸ್ಕೃತರಾಗಿದ್ದಾರೆ. ಅಂತೆಯೇ ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸರು ಕೂಡ ಪ್ರಶಸ್ತಿಗೆ ಭಾಜನರಾಗಿದ್ದು, ಇದಲ್ಲದೆ ಪ್ರಶಸ್ತಿ ಪುರಸ್ಕೃತರಲ್ಲಿ 28 ಮಹಿಳಾ ಪೊಲೀಸ್ ಅಧಿಕಾರಿಗಳೂ ಸೇರಿದ್ದಾರೆ ಎಂದು ತಿಳಿದುಬಂದಿದೆ.

ಅಪರಾಧದ ತನಿಖೆಯ ಉನ್ನತ ವೃತ್ತಿಪರ ಮಾನದಂಡಗಳನ್ನು ಉತ್ತೇಜಿಸುವ ಮತ್ತು ತನಿಖೆಯಲ್ಲಿ ಅಂತಹ ಶ್ರೇಷ್ಠತೆಯನ್ನು ಗುರುತಿಸುವ ಉದ್ದೇಶದಿಂದ 2018ರಲ್ಲಿ ಈ ಪದಕ ನೀಡಿಕೆ ಆರಂಭಿಸಲಾಗಿತ್ತು. ಇದನ್ನು ಪ್ರತಿ ವರ್ಷ ಆಗಸ್ಟ್ 12 ರಂದು ಘೋಷಿಸಲಾಗುತ್ತದೆ.

ತನಿಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಗುರುತಿಸಿ ಕೇಂದ್ರ ತನಿಖಾ ಸಂಸ್ಥೆಗಳು, ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳ ಪೊಲೀಸ್ ಪಡೆಯ ಸದಸ್ಯರಿಗೆ ತನಿಖೆಯಲ್ಲಿ ಶ್ರೇಷ್ಠತೆಯ ಆಧಾರದ ಮೇಲೆ ಪದಕವನ್ನು ನೀಡಲಾಗುತ್ತದೆ. ಹೆಡ್ ಕಾನ್‌ಸ್ಟೆಬಲ್‌ನಿಂದ ಹಿಡಿದು ಪೊಲೀಸ್ ಅಧೀಕ್ಷಕರವರೆಗೆ ಶ್ರೇಣಿಯ ಅರ್ಹ ಅಧಿಕಾರಿಗಳ ಶಿಫಾರಸುಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಲು ಕೇಳಲಾಗಿದೆ.

2021ರ ತನಿಖೆಯಲ್ಲಿನ ಶ್ರೇಷ್ಠತೆಗಾಗಿ ಕೇಂದ್ರ ಗೃಹ ಸಚಿವರ ಪದಕವನ್ನು 152 ಪೊಲೀಸ್ ಸಿಬ್ಬಂದಿಗೆ ನೀಡಲಾಗಿದೆ. 2021 ರಲ್ಲಿ ಈ ಪ್ರಶಸ್ತಿಗಳನ್ನು ಪಡೆದ ಸಿಬ್ಬಂದಿಗಳಲ್ಲಿ ಸಿಬಿಐನಿಂದ 15, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಪೊಲೀಸರಿಂದ ತಲಾ 11, ಉತ್ತರ ಪ್ರದೇಶದ 10, ಕೇರಳ ಮತ್ತು ರಾಜಸ್ಥಾನ ಪೊಲೀಸರಿಂದ 9, ತಮಿಳುನಾಡು ಪೊಲೀಸರಿಂದ 8, ಬಿಹಾರದಿಂದ ಏಳು, ಗುಜರಾತ್‌ನಿಂದ ತಲಾ ಆರು ಮಂದಿ ಸೇರಿದ್ದರು. ಅಂತೆಯೇ ಕರ್ನಾಟಕ ಮತ್ತು ದೆಹಲಿ ಪೊಲೀಸರು ಮತ್ತು ಉಳಿದವರು ಇತರ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಪೊಲೀಸ್ ಸಿಬ್ಬಂದಿಗಳಾಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT