ಸಂಗ್ರಹ ಚಿತ್ರ 
ದೇಶ

ಅಟಲ್ ಪಿಂಚಣಿ ಯೋಜನೆ ನಿಯಮ ಬದಲಾವಣೆ; ತೆರಿಗೆದಾರರು ಫಲಾನುಭವಿಯಾಗಲು ಅರ್ಹರಲ್ಲ!

ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಟಲ್ ಪಿಂಚಣಿ ಯೋಜನೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತೆರಿಗೆದಾರರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎನ್ನಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಅಟಲ್ ಪಿಂಚಣಿ ಯೋಜನೆ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ತೆರಿಗೆದಾರರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ ಎನ್ನಲಾಗಿದೆ.

ಹೌದು.. ಕೇಂದ್ರ ಸರ್ಕಾರ ಅಟಲ್ ಪಿಂಚಣಿ ಯೋಜನೆಯ (ಎಪಿವೈ ಯೋಜನೆ)) ಹೂಡಿಕೆ ನಿಯಮಗಳಲ್ಲಿ ಬದಲಾವಣೆ ಮಾಡಿದ್ದು, ಆದಾಯ ತೆರಿಗೆ ಪಾವತಿಸುವ ಹೂಡಿಕೆದಾರರು 2022ರ ಅಕ್ಟೋಬರ್ 1ರಿಂದ ಅಟಲ್ ಪಿಂಚಣಿ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿರುವುದಿಲ್ಲ. ಒಂದು ವೇಳೆ ಆದಾಯ ತೆರಿಗೆ ಪಾವತಿಸುತ್ತಿರುವ ವ್ಯಕ್ತಿ ಅಕ್ಟೋಬರ್ 1 ಅಥವಾ ಅದರ ನಂತರ ಎಪಿವೈ ಯೋಜನೆಗೆ ಸೇರ್ಪಡೆಗೊಂಡರೆ ಅಂಥ ಖಾತೆಯನ್ನು ಮುಚ್ಚಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಅಕ್ಟೋಬರ್ 1ರಿಂದಲೇ ಅಟಲ್ ಪಿಂಚಣಿ ಯೋಜನೆಯ ಹೊಸ ನಿಯಮಗಳು ಜಾರಿಗೆ ಬರಲಿದ್ದು, ಆದಾಯ ತೆರಿಗೆ ಕಟ್ಟುವ ಫಲಾನುಭವಿ ಖಾತೆ ಮುಚ್ಚಲ್ಪಡುತ್ತದೆ. ಅಂತೆಯೇ 18 ಹಾಗೂ 40 ವರ್ಷಗಳ ನಡುವಿನ ಭಾರತದ ನಾಗರಿಕರು ಈ ಯೋಜನೆಗೆ ಸೇರ್ಪಡೆಗೊಳ್ಳಬಹುದು ಎನ್ನಲಾಗಿದೆ.

'2022ರ ಅಕ್ಟೋಬರ್ 1ರಿಂದ ಆದಾಯ ತೆರಿಗೆ ಪಾವತಿಸುತ್ತಿರುವ ಯಾವುದೇ ನಾಗರಿಕ ಎಪಿವೈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹನಾಗಿರುವುದಿಲ್ಲ. ಒಂದು ವೇಳೆ ಯಾವುದೇ ಚಂದಾದಾರರು ಅಕ್ಟೋಬರ್ 1 ಅಥವಾ ಅದರ ನಂತರ ಸೇರ್ಪಡೆಗೊಂಡರೆ ಹಾಗೂ ಅವರು ಅರ್ಜಿ ಸಲ್ಲಿಸಿದಾಗ ಅಥವಾ ಅದಕ್ಕೂ ಮೊದಲು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬುದು ತಿಳಿದು ಬಂದರೆ ಎಪಿವೈ ಖಾತೆಯನ್ನು ಮುಚ್ಚಲಾಗುತ್ತದೆ. ಆ ದಿನಾಂಕದ ತನಕ ಸಂಗ್ರಹಣೆಗೊಂಡ ಪಿಂಚಣಿಯನ್ನು ಚಂದಾದಾರರಿಗೆ ನೀಡಲಾಗುತ್ತದೆ' ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇಲ್ಲಿಯ ತನಕ 18 ಹಾಗೂ 40 ವರ್ಷಗಳ ನಡುವಿನ ಭಾರತದ ಎಲ್ಲ ನಾಗರಿಕರು ಅವರ ತೆರಿಗೆ ಪಾವತಿ ಸ್ಥಿತಿಗತಿಗಳನ್ನು ಹೊರತುಪಡಿಸಿ ಈ ಯೋಜನೆಗೆ ಸೇರ್ಪಡೆಗೊಳ್ಳಲು ಅರ್ಹರಾಗಿದ್ದರು. ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಚಂದಾದಾರರ ಕೊಡುಗೆಯ ಶೇ.50ರಷ್ಟನ್ನು ಅಥವಾ ವಾರ್ಷಿಕ 1,000ರೂ. ಇದರಲ್ಲಿ ಯಾವುದು ಕಡಿಮೆಯೋ ಅದನ್ನು ನೀಡುತ್ತದೆ. ಸರ್ಕಾರದ ಈ ಕೊಡುಗೆ ಇಲ್ಲಿಯ ತನಕ ಇತರ ಸಾಮಾಜಿಕ ಭದ್ರತ ಯೋಜನೆಗಳ ಫಲಾನುಭವಿ ಆಗದಿರುವವರಿಗೆ ಮಾತ್ರ ಲಭಿಸುತ್ತಿತ್ತು. ಅಲ್ಲದೆ, ಇಲ್ಲಿಯ ತನಕ ಆದಾಯ ತೆರಿಗೆ ಪಾವತಿಗೆ ಸಂಬಂಧಿಸಿದ ಯಾವುದೇ ಷರತ್ತು ಇರಲಿಲ್ಲ. 

ಏನಿದು ಯೋಜನೆ?
ಅನೌಪಚಾರಿಕ ವಲಯದ ಕಾರ್ಮಿಕರಿಗಾಗಿ ಅಟಲ್ ಪಿಂಚಣಿ ಯೋಜನೆಯನ್ನು  (APY scheme) ಕೇಂದ್ರ ಸರ್ಕಾರ 2015-16ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರದ ಈ ಯೋಜನೆ ವೃದ್ಧಾಪ್ಯದಲ್ಲಿ ಆದಾಯ ಭದ್ರತೆ ನೀಡುವ ಜೊತೆಗೆ ಅಸಂಘಟಿತ ವಲಯದ ಎಲ್ಲ ನಾಗರಿಕರನ್ನು ಕೇಂದ್ರೀಕರಿಸಿತ್ತು. ಈ ಯೋಜನೆಯನ್ನು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯ (NPS) ಮೂಲಕ ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತದೆ. ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ಚಂದಾದಾರರಿಗೆ ಸರ್ಕಾರ ನಿಗದಿತ ಕನಿಷ್ಠ ಮಾಸಿಕ ಪಿಂಚಣಿ ನೀಡಲಾಗುತ್ತದೆ. ಈ ಪಿಂಚಣಿ ಮೊತ್ತ ತಿಂಗಳಿಗೆ 1,000ರೂ. ಹಾಗೂ 5,000ರೂ. ನಡುವೆ ಇರುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT