ಸಾಂದರ್ಭಿಕ ಚಿತ್ರ 
ದೇಶ

ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ ಐವರು ಸಾವು

ಬಿಹಾರದ ಸರನ್ ಜಿಲ್ಲೆಯ ಭೂಲ್ಪುರ್ ಗ್ರಾಮದಲ್ಲಿ ಒಟ್ಟು ಐದು ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರನ್(ಬಿಹಾರ): ಬಿಹಾರದ ಸರನ್ ಜಿಲ್ಲೆಯ ಭೂಲ್ಪುರ್ ಗ್ರಾಮದಲ್ಲಿ ಒಟ್ಟು ಐದು ಜನರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವ್ಯಕ್ತಿಗಳು ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅವರು ನಿಜವಾಗಿಯೂ ನಕಲಿ ಮದ್ಯ ಸೇವಿಸಿದ್ದಾರೆಯೇ ಎಂಬುದು ಇನ್ನೂ ದೃಢಪಟ್ಟಿಲ್ಲ ಎಂದು ಮರ್ಹೌರಾ ಸರನ್ ನ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಯೋಗೇಂದ್ರ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಮೃತರನ್ನು ಅಲ್ಲಾವುದ್ದೀನ್ ಖಾನ್, ಕಾಮೇಶ್ವರ್ ಮಹತೋ, ರೋಹಿತ್ ಕುಮಾರ್ ಸಿಂಗ್, ರಾಜೇಂದ್ರ ರಾಮ್ ಮತ್ತು ರಾಮ್ ಲೈಕ್ ಮಹತೋ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಮರ್ಹೌರಾ ಪ್ರದೇಶದ ಆವರಣದ ಮೇಲೆ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದ ನಂತರ ಸುಮಾರು 10 ರಿಂದ 12 ಜನರನ್ನು ಬಂಧಿಸಲಾಗಿದೆ.

ಇದಕ್ಕೂ ಮೊದಲು ಆಗಸ್ಟ್ 5 ರಂದು ಸರನ್ ಜಿಲ್ಲೆಯ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಎಂಟು ಜನರು ಸಾವನ್ನಪ್ಪಿದರು ಮತ್ತು ಹಲವರು ಅಸ್ವಸ್ಥರಾಗಿದ್ದರು. ಇನ್ನು ಕೆಲವರು ದೃಷ್ಟಿ ಕಳೆದುಕೊಂಡಿದ್ದ ಘಟನೆ ಸರನ್ ನ ಮೇಕರ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾತಾ ಗ್ರಾಮದಲ್ಲಿ ವರದಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel