ಅಯೋಧ್ಯೆಯ ಉದ್ದೇಶಿತ ರಾಮಮಂದಿರದ ನಕ್ಷೆ 
ದೇಶ

ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಚಂಪತ್‌ ರೈ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಅವರು ಹೇಳಿದ್ದಾರೆ.

ಸುಲ್ತಾನ್‌ಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್‌ ರೈ ಅವರು ಹೇಳಿದ್ದಾರೆ.

ಶುಕ್ರವಾರ ರಕ್ಷಾ ಬಂಧನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರೈ ಅವರು, ಮುಂದಿನ ವರ್ಷ ಡಿಸೆಂಬರ್‌ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ. ಆಗ ಭವ್ಯ ಮಂದಿರದಲ್ಲಿ ಜನರು ರಾಮಲಲ್ಲಾನ ದರ್ಶನ ಪಡೆಯಬಹುದು ಎಂದು ತಿಳಿಸಿದರು.

"ಸುಲ್ತಾನ್‌ಪುರ ಅಯೋಧ್ಯೆಗೆ ಸಮೀಪದಲ್ಲಿರುವುದರಿಂದ, ಮುಂದಿನ ವರ್ಷ ಡಿಸೆಂಬರ್‌ನಲ್ಲಿ ಶ್ರೀರಾಮ ಲಲ್ಲಾನ 'ದರ್ಶನ' ಪಡೆಯಲು ನಾನು ಇಲ್ಲಿನ ಜನರಿಗೆ ಆಹ್ವಾನ ನೀಡುತ್ತಿದ್ದೇನೆ" ಎಂದು ಅವರು ಹೇಳಿದರು.

ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, 2023ರ ಡಿಸೆಂಬರ್‌ನಲ್ಲಿ ಭಕ್ತಾದಿಗಳ ದರ್ಶನಕ್ಕೆ ದೇವಾಲಯ ಸಿದ್ಧವಾಗಲಿದೆ ಎಂದು ರೈ ತಿಳಿಸಿದ್ದಾರೆ.

ನಿರ್ಮಾಣ ಕಾರ್ಯದಲ್ಲಿ ಕಬ್ಬಿಣವನ್ನು ಬಳಸುತ್ತಿಲ್ಲ ಎಂದು ಪ್ರತಿಪಾದಿಸಿದ ರೈ, ದೇವಾಲಯದ ವಿನ್ಯಾಸವು ಜನರು ಆಶ್ಚರ್ಯಚಕಿತರಾಗುವಂತಿದೆ ಎಂದಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವನ್ನು ದೇವಾಲಯದ ನಿರ್ಮಾಣಕ್ಕಾಗಿ ಕೇಂದ್ರದಿಂದ ಸ್ಥಾಪಿಸಲ್ಪಟ್ಟ ಟ್ರಸ್ಟ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT