ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 15,815 ಹೊಸ ಪ್ರಕರಣ, ಸಾವಿಗೀಡಾದವರ ಸಂಖ್ಯೆ ಅಧಿಕ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 15,815 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 68 ಜನರು ಸಾವಿಗೀಡಾಗಿದ್ದಾರೆ. ಈ ಪೈಕಿ ಕೇರಳವೊಂದರಲ್ಲೇ 24 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 15,815 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 68 ಜನರು ಸಾವಿಗೀಡಾಗಿದ್ದಾರೆ. ಈ ಪೈಕಿ ಕೇರಳವೊಂದರಲ್ಲೇ 24 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಸದ್ಯ 1,19,264 ಪ್ರಕರಣಗಳಿವೆ. ಒಟ್ಟು ಸೊಂಕು ಪ್ರಕರಣಗಳ ಪೈಕಿ ಶೇ 0.27ರಷ್ಟು ಸಕ್ರಿಯ ಪ್ರಕರಣಗಳಿವೆ.

15,815 ಹೊಸ ಪ್ರಕರಣಗಳ ಮೂಲಕ ಒಟ್ಟು ಸೋಂಕು ಪ್ರಕರಣಗಳು 4,42,39,372ಕ್ಕೆ ಏರಿಕೆಯಾಗಿದೆ. ಈವರೆಗೆ 5,26,996 ಜನರು ಸಾವಿಗೀಡಾಗಿದ್ದಾರೆ. 4,35,93,112 ಜನರು ಸೋಂಕಿನಿಂದ ಚೇತರಿಸಿಕೊಂಡಿರುವುದಾಗಿ ಅಂಕಿಅಂಶಗಳಿಂದ ತಿಳಿದುಬಂದಿದೆ.

ದೈನಂದಿನ ಪಾಸಿಟಿವಿಟಿ ದರವು ಶೇ 4.36ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.79ರಷ್ಟಿದೆ. ಮರಣ ಪ್ರಮಾಣ ಶೇ 1.19ರಷ್ಟಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.54ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಂಗವಾಗಿ ಈವರೆಗೆ ದೇಶದಲ್ಲಿ 207.71 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ