ಕೊರೋನಾ ಪರೀಕ್ಷೆ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 14,092 ಹೊಸ ಪ್ರಕರಣ, 41 ಜನರು ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 14,092 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 41 ಜನರು ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 14,092 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 41 ಜನರು ಸಾವಿಗೀಡಾಗಿದ್ದಾರೆ. ಸಕ್ರಿಯ ಪ್ರಕರಣಗಳು 1,16,861ಕ್ಕೆ ಇಳಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈ ಪೈಕಿ ಕೇರಳವೊಂದರಲ್ಲೇ 12 ಜನರು ಸಾವಿಗೀಡಾಗುವ ಮೂಲಕ ದೇಶದಲ್ಲಿ ಈವರೆಗೆ 5,27,037 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಒಟ್ಟು ಸೊಂಕು ಪ್ರಕರಣಗಳ ಪೈಕಿ ಶೇ 0.26ರಷ್ಟು ಸಕ್ರಿಯ ಪ್ರಕರಣಗಳಿವೆ.

ಒಟ್ಟು ಸೋಂಕು ಪ್ರಕರಣಗಳು 4,42,53,464ಕ್ಕೆ ಏರಿಕೆಯಾಗಿದೆ. 4,36,09,566 ಜನರು ಸೋಂಕಿನಿಂದ ಚೇತರಿಸಿಕೊಂಡಿರುವುದಾಗಿ ಅಂಕಿಅಂಶಗಳಿಂದ ತಿಳಿದುಬಂದಿದೆ.

ದೈನಂದಿನ ಪಾಸಿಟಿವಿಟಿ ದರವು ಶೇ 3.69ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 4.57ರಷ್ಟಿದೆ. ಮರಣ ಪ್ರಮಾಣ ಶೇ 1.19ರಷ್ಟಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.54ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಂಗವಾಗಿ ಈವರೆಗೆ ದೇಶದಲ್ಲಿ 207.99 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!