ಸ್ವಾತಂತ್ರೋತ್ಸವ: ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ ಎಫ್, ಪಾಕ್ ರೆಂಜರ್ಸ್ ನಡುವೆ ಪರಸ್ಪರ ಸಿಹಿ ವಿನಿಮಯ
ಸ್ವಾತಂತ್ರೋತ್ಸವ ಅಂಗವಾಗಿ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಅಠಾರಿ- ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಹಾಗೂ ಪಾಕಿಸ್ತಾನದ ರೆಂಜರ್ಸ್ ಗಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು.
ಜಮ್ಮು-ಕಾಶ್ಮೀರ: ಸ್ವಾತಂತ್ರೋತ್ಸವ ಅಂಗವಾಗಿ ಜಮ್ಮು-ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಅಠಾರಿ- ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ ಹಾಗೂ ಪಾಕಿಸ್ತಾನದ ರೆಂಜರ್ಸ್ ಗಳು ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡರು.
ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಿನ್ನೆ ದಿನ ಭಾರತೀಯ ಪಡೆ ಅವರಿಗೆ ಶುಭಾಶಯ ಕೋರಿತ್ತು. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ಮತ್ತು ಪಂಜಾಬ್, ಜಮ್ಮು-ಕಾಶ್ಮೀರದ ಗಡಿಯಲ್ಲಿ ಪರಸ್ಪರ ಸಿಹಿ ವಿನಿಮಯ ಮಾಡಿಕೊಳ್ಳಲಾಗಿತ್ತು. ಅಠಾರಿ- ವಾಘಾ ಗಡಿಯಲ್ಲಿ ಪಾಕಿಸ್ತಾನದ ರೆಂಜರ್ಸ್ ಗಳು ಬಿಎಸ್ ಎಫ್ ಗೆ ಸಿಹಿ ನೀಡಿದ್ದರು.
ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡುತ್ತಿದೆ: ಪ್ರಧಾನಿ ಮೋದಿ
ಇದಕ್ಕೆ ಪ್ರತ್ಯುತ್ತರವಾಗಿ ಇಂದು ಭಾರತ ಗಡಿ ಭದ್ರತಾ ಕೂಡಾ ಪಾಕಿಸ್ತಾನದ ರೆಂಜರ್ಸ್ ಗಳಿಗೆ ಸಿಹಿ ನೀಡಿದ್ದು, ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳಲಾಗಿದೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ದೇಶದ ಗತ ವೈಭವ್ಯ, ಇಲ್ಲಿನ ಜನರು, ಸಂಸ್ಕೃತಿ ಮತ್ತು ಸಾಧನೆಯನ್ನು ಸ್ಮರಿಸಲಾಗುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.