ದೃಶ್ಯ ಸಿಸಿಟಿವಿಯಲ್ಲಿ ಸರೆ 
ದೇಶ

ಪಂಜಾಬ್: ಸಬ್‌ಇನ್ಸ್‌ಪೆಕ್ಟರ್‌ ಜೀಪ್ ಗೆ ಬಾಂಬ್ ಇಟ್ಟ ದುಷ್ಕರ್ಮಿಗಳು, ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಪಂಜಾಬ್ ನ ಅಮೃತಸರದಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಜೀಪ್ ಗೆ ದುಷ್ಕರ್ಮಿಗಳು ಬಾಂಬ್ ಇಟ್ಟು ಪರಾರಿಯಾಗಿದ್ದಾರೆ. 

ಅಮೃತಸರ: ಪಂಜಾಬ್ ನ ಅಮೃತಸರದಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಜೀಪ್ ಗೆ ದುಷ್ಕರ್ಮಿಗಳು ಬಾಂಬ್ ಇಟ್ಟು ಪರಾರಿಯಾಗಿದ್ದಾರೆ. 

ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಕಿಡಿಗೇಡಿಗಳು ಜೀಪ್ ಅಡಿಗೆ ಬಾಂಬ್ ಫಿಕ್ಸ್ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಸ್ಥಳಕ್ಕೆ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳ ಬಾಂಬ್ ಅನ್ನು ನಿಷ್ಕ್ರಿಯಗೊಳಿಸಿದೆ . ಈ ಘಟನೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಂಜಾಬ್‌ನಲ್ಲಿ ಉಗ್ರಗಾಮಿಗಳ ವಿರುದ್ಧ ಕೆಲಸ ಮಾಡಿದ್ದರಿಂದ ತನ್ನನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಎಸ್‌ಐ ದಿಲ್‌ಬಾಗ್ ಸಿಂಗ್ ಹೇಳಿದ್ದಾರೆ.

'ನನ್ನ ಕಾರಿನ ಕೆಳಗೆ ಬಾಂಬ್ ಇಡಲಾಗಿತ್ತು. ನನ್ನ ಕಾರ್ ಕ್ಲೀನರ್ ಅದರ ಬಗ್ಗೆ ನನಗೆ ಮಾಹಿತಿ ನೀಡಿದರು. ನಸುಕಿನ 2 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ನನ್ನ ಕಾರಿನ ಕೆಳಗೆ ಏನನ್ನೋ ಇಡುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!