ಸುಪ್ರೀಂಕೋರ್ಟ್ 
ದೇಶ

ಭಾರತೀಯ ಫುಟ್ಬಾಲ್ ಫೆಡರೇಶನ್ ಅಮಾನತು: ಎಐಎಫ್‌ಎಫ್ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂಗೆ ಕೇಂದ್ರ ಮನವಿ

ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ (ಫಿಫಾ) ಸೋಮವಾರ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಅನ್ನು ಅಮಾನತುಗೊಳಿಸಿದೆ. ಈ ವಿಚಾರವಾಗಿ ಮಂಗಳವಾರ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ವಿಚಾರಣೆ ನಡೆಸುವಂತೆ ಕೋರಿದೆ.  

ನವದೆಹಲಿ: ವಿಶ್ವ ಫುಟ್‌ಬಾಲ್‌ನ ಆಡಳಿತ ಮಂಡಳಿ (ಫಿಫಾ) ಸೋಮವಾರ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್‌ಎಫ್) ಅನ್ನು ಅಮಾನತುಗೊಳಿಸಿದೆ. ಈ ವಿಚಾರವಾಗಿ ಮಂಗಳವಾರ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ವಿಚಾರಣೆ ನಡೆಸುವಂತೆ ಕೋರಿದೆ.  

ಫೆಡರೇಶನ್‌ನಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪ ಹಾಗೂ ನಿಯಮಗಳ ಉಲ್ಲಂಘನೆಯ ಆರೋಪದ ಮೇಲೆ ಫಿಫಾ ಈ ನಿರ್ಧಾರ ಕೈಗೊಂಡಿದ್ದು, ಅಕ್ಟೋಬರ್‌ನಲ್ಲಿ ಭಾರತದಲ್ಲಿ ನಡೆಯಯಬೇಕಿದ್ದ 17 ವರ್ಷ ಒಳಗಿನ ಮಹಿಳಾ ವಿಶ್ವಕಪ್‌ ಟೂರ್ನಿ ರದ್ದಾಗಿದೆ.

ಭಾರತವು ಅಕ್ಟೋಬರ್ 11-30 ರವರೆಗೆ 17 ವರ್ಷದೊಳಗಿನ ಮಹಿಳಾ ವಿಶ್ವಕಪ್‌ಗೆ ಆತಿಥ್ಯ ವಹಿಸಲಿತ್ತು. ಇದಕ್ಕೂ ಹಿಂದೆ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಭಾರತದಲ್ಲಿ 2020ರ ಪಂದ್ಯಾವಳಿ ರದ್ದುಗೊಂಡಿತ್ತು.

ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ ಮತ್ತು ಎಎಸ್ ಬೋಪಣ್ಣ ಅವರಿದ್ದ ಪೀಠಕ್ಕೆ ಕೇಂದ್ರದ ಪರವಾಗಿ ವಾದ ಮಂಡಿಸಲಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, 'ಪ್ರಮುಖ ಬೆಳವಣಿಗೆ' ನಡೆದಿದೆ ಮತ್ತು ಫಿಫಾ ಭಾರತವನ್ನು ಅಮಾನತುಗೊಳಿಸಿ ಪತ್ರವನ್ನು ಕಳುಹಿಸಿದೆ. ಹೀಗಾಗಿ ತುರ್ತು ವಿಚಾರಣೆ ಕೈಗೆತ್ತಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಈ ವಿಚಾರವನ್ನು ಬುಧವಾರಕ್ಕೆ ಪಟ್ಟಿ ಮಾಡಲಾಗಿದೆ ಮತ್ತು ಅದನ್ನು ಮೊದಲ ವಿಷಯವಾಗಿ ವಿಚಾರಣೆಗೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ಪೀಠವು ಮೆಹ್ತಾಗೆ ತಿಳಿಸಿದೆ.

ನ್ಯಾಯಾಲಯದ ಮುಂದೆ ಬಾಕಿ ಇರುವ ಎಐಎಫ್‌ಎಫ್ ವಿಷಯವನ್ನು ತುರ್ತಾಗಿ ವಿಚಾರಣೆ ನಡೆಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಮೆಹ್ತಾ ಹೇಳಿದರು.

85 ವರ್ಷಗಳ ಇತಿಹಾಸದಲ್ಲಿ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (ಎಐಎಫ್ಎಫ್) ಅನ್ನು ಫಿಫಾ ನಿಷೇಧಿಸಿರುವುದು ಇದೇ ಮೊದಲು.

2020ರ ಡಿಸೆಂಬರ್‌ನಲ್ಲಿ ಚುನಾವಣೆಗಳನ್ನು ನಡೆಸದ ಕಾರಣಕ್ಕಾಗಿ ಮೇ 18 ರಂದು ಸುಪ್ರೀಂ ಕೋರ್ಟ್, ಪ್ರಫುಲ್ ಪಟೇಲ್ ಅವರನ್ನು ಎಐಎಫ್‌ಎಫ್ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ ನಂತರ ಭಾರತದ ಮೇಲಿನ ನಿಷೇಧ ಕಾರ್ಡ್‌ನಲ್ಲಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT