ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಭೀಕರ ರಸ್ತೆ ಅಪಘಾತ: 6 ಯೋಧರು ಹುತಾತ್ಮ, ಹಲವರಿಗೆ ಗಾಯ

ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಚಂದನ್ ವಾರಿ ಪಹಲ್ಗಾಮ್ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಐಟಿಬಿಪಿ ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶ್ರೀನಗರದ ಸೇನಾಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುತ್ತಿರುವ ದೃಶ್ಯ
Sumana Upadhyaya
Updated On : 16 Aug 2022, 6:53 pm

ಅನಂತ್ ನಾಗ್: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಚಂದನ್ ವಾರಿ ಪಹಲ್ಗಾಮ್ ಸಮೀಪ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಐಟಿಬಿಪಿ ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಶ್ರೀನಗರದ ಸೇನಾಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

37 ಮಂದಿ ಐಟಿಬಿಪಿ ಯೋಧರು ಮತ್ತು ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಪಹಲ್ಗಾಮ್ ಸಮೀಪ ನದಿ ಪಾತ್ರದಲ್ಲಿ ಬ್ರೇಕ್ ಫೈಲ್ಯೂರ್ ಆಗಿ ಅಪಘಾತ ಭೀಕರ ಅಪಘಾತ ಸಂಭವಿಸಿದ್ದು, ಹುತಾತ್ಮ ಯೋಧರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement