ಕೇಟರಿಂಗ್ ವ್ಯವಸ್ಥಾಪಕನಿಗೆ ಶಿವಸೇನೆ ಶಾಸಕನಿಂದ ಕಪಾಳ ಮೋಕ್ಷ 
ದೇಶ

ಕಾರ್ಮಿಕರಿಗೆ ಕಳಪೆ ಆಹಾರದ ಆರೋಪ: ಕೇಟರಿಂಗ್ ಮ್ಯಾನೇಜರ್ ಗೆ ಶಿವಸೇನೆ ಶಾಸಕನಿಂದ ಕಪಾಳಮೋಕ್ಷ! 

ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವ ಕೇಟರಿಂಗ್ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಮುಂಬೈ: ಶಿವಸೇನೆಯ ಶಾಸಕ ಸಂತೋಷ್ ಬಂಗಾರ್ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವ ಕೇಟರಿಂಗ್ ಉದ್ಯೋಗಿಗೆ ಕಪಾಳ ಮೋಕ್ಷ ಮಾಡಿದ್ದಾರೆ.
    
ಕಾರ್ಮಿಕರಿಗೆ ಕಳಪೆ ಗುಣಮಟ್ಟದ ಆಹಾರ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಸೆನೆಯ ಶಾಸಕ ಈ ರೀತಿ ಮಾಡಿದ್ದಾರೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,  ಆಹಾರದ ಬಗ್ಗೆ ಪ್ರಶ್ನಿಸುವಾಗ ಬಂಗಾರ್ ಅವರು ಎರಡು ಬಾರಿ ಕೆನ್ನೆಗೆ ಹೊಡೆದಿರುವುದು ವೈರಲ್ ಆಗತೊಡಗಿದೆ.

ಈ ಘಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಬಂಗಾರ್, ಮಿಡ್ ಡೇ ಮೀಲ್ಸ್ ಯೋಜನೆಯ ಆಹಾರವನ್ನು ಕಳಪೆ ಗುಣಮಟ್ಟದ ಸರಕುಗಳಿಂದ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ. 

ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಶಾಸಕರು, ಇದು ಅನುದಾನಗಳನ್ನು ಲೂಟಿ ಹೊಡೆಯುತ್ತಿರುವ ಸರ್ಕಾರವಾಗಿದ್ದು, ಜನರ ಜೀವದೊಂದಿಗೆ ಆಟವಾಡುತ್ತಿದೆ.  ರಾಜ್ಯ ಸರ್ಕಾರ ಈ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಏಕನಾಥ್ ಶಿಂಧೆ ಬಣದ ಶಾಸಕ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!