ಸಾಂದರ್ಭಿಕ ಚಿತ್ರ 
ದೇಶ

ದೆಹಲಿಯ ಮನೆಯಲ್ಲಿ ಅತ್ತೆ, ಸೊಸೆಯ ಹತ್ಯೆ; ಶವ ಪತ್ತೆ: ಹಂತಕರ ಪತ್ತೆಗೆ ಬಲೆ ಬೀಸಿದ ಪೊಲೀಸರು

ದೆಹಲಿಯ ಶಾಹದಾರ ಪ್ರದೇಶದ ಮನೆಯೊಂದರಲ್ಲಿ ಸೋಮವಾರ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ದೆಹಲಿಯ ಶಾಹದಾರ ಪ್ರದೇಶದ ಮನೆಯೊಂದರಲ್ಲಿ ಸೋಮವಾರ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲಿಯಾದವರನ್ನು ಶಹದಾರದ ಸುಭಾಷ್ ಪಾರ್ಕ್ ಪ್ರದೇಶದ ನಿವಾಸಿ 70 ವರ್ಷದ ವಿಮಲಾ ದೇವಿ ಮತ್ತು ಅವರ ಸೊಸೆ 45 ವರ್ಷದ ಡೋಲಿ ರೈ ಎಂದು ಗುರುತಿಸಲಾಗಿದೆ.

ಕೊಲೆ ನಡೆದಾಗ ವಿಮಲಾ ದೇವಿಯ ಮಕ್ಕಳಾದ ಸಾರ್ಥಕ್ ರೈ ಮತ್ತು ಶಶಾಂಕ್ ರೈ ಇಬ್ಬರೂ ದೆಹಲಿಯಿಂದ ಹೊರಗಿದ್ದರು ಎನ್ನಲಾಗಿದೆ.

ಮೊಮ್ಮಕ್ಕಳು ಮನೆಗೆ ಹಿಂತಿರುಗಿದಾಗ ಮನೆಗೆ ಬೀಗ ಹಾಕಿರುವುದು ಕಂಡುಬಂದಿದೆ. ತಮ್ಮೊಂದಿಗಿದ್ದ ಮತ್ತೊಂದು ಕೀ ಬಳಸಿ ಬಾಗಿಲು ತೆರೆದು ನೋಡಿದಾಗ, ತಮ್ಮ ಸಾಕು ನಾಯಿಯನ್ನು ಒಂದು ಮೂಲೆಯಲ್ಲಿ ಕಟ್ಟಿಹಾಕಿ, ತಮ್ಮ ತಾಯಿ ಮತ್ತು ಅಜ್ಜಿ ನೆಲದ ಮೇಲೆ ಸತ್ತು ಬಿದ್ದಿರುವುದು ಪತ್ತೆಯಾಗಿದೆ.

ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣಗಳು ನಾಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಚೂರಿ ಇರಿತದಿಂದಾಗಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಘಟನೆ ಬಗ್ಗೆ ಮಂಗಳವಾರ ಬೆಳಗಿನ ಜಾವ 4.20ರ ಸುಮಾರಿಗೆ ಪೊಲೀಸರಿಗೆ ಕರೆ ಮಾಡಲಾಗಿತ್ತು. ಸ್ಥಳಕ್ಕೆ ಪೊಲೀಸ್ ತಂಡ ಆಗಮಿಸಿದ್ದು, ಹಂತಕರನ್ನು ಹಿಡಿಯಲು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!