ಬಂಧನ 
ದೇಶ

ಪಂಜಾಬ್ ಪೊಲೀಸ್ ಅಧಿಕಾರಿಗಳ ವಾಹನದಲ್ಲಿ ಐಇಡಿ ಇರಿಸಿದ್ದ ಇಬ್ಬರ ಬಂಧನ

ಪೊಲೀಸ್ ಅಧಿಕಾರಿಯ ವಾಹನದ ಕೆಳಗೆ ಐಇಡಿ ಪತ್ತೆಯಾದ ಪ್ರಕರಣದಲ್ಲಿ ಪಂಜಾಪ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 

ಅಮೃತ್ ಸರ: ಪೊಲೀಸ್ ಅಧಿಕಾರಿಯ ವಾಹನದ ಕೆಳಗೆ ಐಇಡಿ ಪತ್ತೆಯಾದ ಪ್ರಕರಣದಲ್ಲಿ ಪಂಜಾಪ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾಗಿರುವ ಇಬ್ಬರು ಸ್ಫೋಟಕವನ್ನು ಇರಿಸಿದ್ದರು.  ಬಂಧನಕ್ಕೊಳಗಾಗಿರುವ ಇಬ್ಬರೂ ತರ್ನ್ ತರನ್ ಜಿಲ್ಲೆಯ ಪಟ್ಟಿ ಪ್ರದೇಶದ ನಿವಾಸಿಗಳಾಗಿದ್ದಾರೆ. 

ರಂಜಿತ್ ಅವೆನ್ಯೂ ಪ್ರದೇಶದಲ್ಲಿ ಸಬ್ ಇನ್ಸ್ಪೆಕ್ಟರ್ ದಿಬಾಘ್ ಸಿಂಗ್ ಅವರ ಎಸ್ ಯುವಿ ಅಡಿಯಲ್ಲಿ ಸ್ಫೋಟಕ ಸಾಧನ ಪತ್ತೆಯಾಗಿತ್ತು.  ಕಾರ್ ಕ್ಲೀನರ್ ಈ ಸ್ಫೋಟಕವನ್ನು ಪತ್ತೆ ಮಾಡಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇಬ್ಬರು ದ್ವಿಚಕ್ರ ವಾಹನ ಸವಾರರು ಎಸ್ ಯುವಿ ಅಡಿಯಲ್ಲಿ ಸ್ಫೋಟಕ ಇರಿಸಿ ಪರಾರಿಯಾಗಿದ್ದು ದಾಖಲಾಗಿತ್ತು. 

ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಪ್ರಧಾನ ನಿರ್ದೇಶಕ ಆರ್ ಎನ್ ಡೋಕೆ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಸುಧಾರಿತ ಸ್ಫೋಟಕ ಸಾಧನ ಅಂದಾಜು 2.70 ಕೆಜಿಯಷ್ಟು ತೂಕವಿತ್ತು ಹಾಗೂ ಆರ್ ಡಿಎಕ್ಸ್, ಟೈಮರ್ ನ್ನು ಒಳಗೊಂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ