ಕೆ.ಸಿ ವೇಣುಗೋಪಾಲ್ 
ದೇಶ

ಕೇರಳ ಸೋಲಾರ್ ಹಗರಣ ಆರೋಪಿ ಮಹಿಳೆಗೆ ಲೈಂಗಿಕ ಕಿರುಕುಳ: ಕೆ.ಸಿ ವೇಣುಗೋಪಾಲ್‌ಗೆ ಸಿಬಿಐ ಡ್ರಿಲ್

ಕೇರಳ ಸೋಲಾರ್ ಹಗರಣದ ಪ್ರಮುಖ ಆರೋಪಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಅವರನ್ನು ಸಿಬಿಐ ವಿಚಾರಣೆ ನಡೆಸಿರುವುದು ಬೆಳಕಿಗೆ ಬಂದಿದೆ.

ನವದೆಹಲಿ: ಕೇರಳ ಸೋಲಾರ್ ಹಗರಣದ ಪ್ರಮುಖ ಆರೋಪಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಕಾಂಗ್ರೆಸ್ ನಾಯಕ ಕೆ.ಸಿ ವೇಣುಗೋಪಾಲ್ ಅವರನ್ನು ಸಿಬಿಐ ವಿಚಾರಣೆ ನಡೆಸಿರುವುದು ಬೆಳಕಿಗೆ ಬಂದಿದೆ.

ನವದೆಹಲಿಯಲ್ಲಿ ಕಳೆದ ವಾರ ಅನೇಕ ಗಂಟೆಗಳ ಕಾಲ ವೇಣುಗೋಪಾಲ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು ಎಂದು ಸಿಬಿಐ ಮೂಲಗಳು ಮಂಗಳವಾರ ಮಾಧ್ಯಮಗಳಿಗೆ ತಿಳಿಸಿವೆ. 2012 ರಲ್ಲಿ ಬೆಳಕಿಗೆ ಬಂದಿದ್ದ ಸೋಲಾರ್ ಎನರ್ಜಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಕೇರಳ ಕ್ರೈಂ ಬ್ರ್ಯಾಂಚ್ ತನಿಖೆ ನಡೆಸುತ್ತಿತ್ತು.

ಈ ಮಧ್ಯೆ ಸೋಲಾರ್ ಹಗರಣ ಕೇರಳದಲ್ಲಿ ಸಾಕಷ್ಟು ಸದ್ದು ಮಾಡಿದ್ದರಿಂದ ಸಿಎಂ ಪಿಣರಾಯಿ ವಿಜಯನ್ ಅವರು ಕಳೆದ ವರ್ಷ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿದ್ದರು.

ಮಹಿಳೆ ಹೇಳಿಕೆ ಆಧರಿಸಿ ಕೆ.ಸಿ ವೇಣುಗೋಪಾಲ್, ಮಾಜಿ ಸಿಎಂ ಉಮ್ಮನ್ ಚಾಂಡಿ, ಸಂಸದ ಹಿಬಿ ಇದನ್, ಮಾಜಿ ಸಚಿವ ಎ.ಪಿ ಅನಿಲ್ ಕುಮಾರ್, ಸಂಸದ ಅಡೂರ್ ಪ್ರಕಾಶ್ ಹಾಗೂ ಬಿಜೆಪಿ ಮುಖಂಡ ಎ.ಪಿ ಅಬ್ದುಲ್ ಕುಟ್ಟಿ ಸೇರಿದಂತೆ ಒಟ್ಟು ಆರು ಜನರ ಮೇಲೆ ಲೈಂಗಿಕ ಶೋಷಣೆ ಪ್ರಕರಣವನ್ನು ಸಿಬಿಐ ದಾಖಲಿಸಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದೇ ಮೊದಲ ಬಾರಿಗೆ ಪ್ರಮುಖ ಆರೋಪಿ ವೇಣುಗೋಪಾಲ್ ಅವರನ್ನು ಸುದೀರ್ಘ ವಿಚಾರಣೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!