ಬಿಜೆಪಿ-ಕಾಂಗ್ರೆಸ್ 
ದೇಶ

ಗುಜರಾತ್: ಕಾಂಗ್ರೆಸ್ ಮಾಜಿ ನಾಯಕರಾದ ನರೇಶ್ ರಾವಲ್, ರಾಜು ಪರ್ಮಾರ್ ಬಿಜೆಪಿ ಸೇರ್ಪಡೆ

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸುಮಾರು ಎರಡು ವಾರಗಳ ನಂತರ, ಗುಜರಾತ್‌ನ ಮಾಜಿ ಸಚಿವ ನರೇಶ್ ರಾವಲ್ ಮತ್ತು ಮಾಜಿ ರಾಜ್ಯಸಭಾ ಸದಸ್ಯ ರಾಜು ಪರ್ಮಾರ್ ಅವರು...

ಗಾಂಧಿನಗರ: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಸುಮಾರು ಎರಡು ವಾರಗಳ ನಂತರ, ಗುಜರಾತ್‌ನ ಮಾಜಿ ಸಚಿವ ನರೇಶ್ ರಾವಲ್ ಮತ್ತು ಮಾಜಿ ರಾಜ್ಯಸಭಾ ಸದಸ್ಯ ರಾಜು ಪರ್ಮಾರ್ ಅವರು ಬುಧವಾರ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರಿದರು.

ಇಬ್ಬರೂ ನಾಯಕರು ದಶಕಗಳ ಕಾಲ ಕಾಂಗ್ರೆಸ್‌ನೊಂದಿಗೆ ಇದ್ದರು. ಇಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್ ಅವರು ಅವರಿಗೆ ಕೇಸರಿ ಸ್ಕಾರ್ಫ್ ಮತ್ತು ಕ್ಯಾಪ್ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ನರೇಶ್ ರಾವಲ್, ರಾಜು ಪರ್ಮಾರ್ ಅವರ ಬೆಂಬಲಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಆಡಳಿತ ಪಕ್ಷಕ್ಕೆ ಸೇರ್ಪಡೆಗೊಂಡರು.

1988 ಮತ್ತು 2006 ರ ನಡುವೆ ಮೂರು ಅವಧಿಗೆ ಪರ್ಮಾರ್ ಗುಜರಾತ್‌ನಿಂದ ಕಾಂಗ್ರೆಸ್‌ ರಾಜ್ಯಸಭಾ ಸದಸ್ಯರಾಗಿದ್ದರು. ದಲಿತ ಸಮುದಾಯದ ಪ್ರಮುಖ ನಾಯಕರಾಗಿದ್ದ ಅವರು ಎಸ್‌ಸಿ/ಎಸ್‌ಟಿ ರಾಷ್ಟ್ರೀಯ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

CM ಡಿಕೆಶಿ​​ ಕುರ್ತಾ ಹಿಡಿದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ವಿಡಿಯೋ ವೈರಲ್; ಬಂಡೆಗೆ ಸಿಕ್ಕ ಮರ್ಯಾದೆ! ಫುಲ್‌ ಅನ್‌ ರೆಸ್ಪೆಕ್ಟು!

ಕರ್ನಾಟಕ ಸೇರಿ 5 ರಾಜ್ಯಗಳಿಗೆ 2 ದಿನಗಳಲ್ಲಿ ಭಾರೀ ಮಳೆ: IMD ಎಚ್ಚರಿಕೆ