ದೇಶ

ಕೋವಿಡ್-19: 24 ಗಂಟೆಗಳ ಅವಧಿಯಲ್ಲಿ 12,608 ಹೊಸ ಪ್ರಕರಣ, ಸೋಂಕಿನಿಂದ 72 ಜನರು ಸಾವು

Ramyashree GN

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,608 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,42,98,864 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇಂದು ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳು 1,01,343ಕ್ಕೆ ಇಳಿಕೆಯಾಗಿದೆ. ಇದೇ ಅವಧಿಯಲ್ಲಿ 16,251 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ 72 ಜನರು ಸೋಂಕಿನಿಂದ ಮೃತಪಟ್ಟಿದ್ದು, ಈ ಪೈಕಿ ಕೇರಳವೊಂದರಲ್ಲೇ ಅಧಿಕ 29 ಜನರು ಸಾವಿಗೀಡಾಗಿದ್ದಾರೆ. ಈವರೆಗೆ 5,27,206 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.23ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರ ಶೇ 98.58ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 3.48ರಷ್ಟಿದೆ.

SCROLL FOR NEXT