ದೇಶ

ಕೋವಿಡ್-19: ದೇಶದಲ್ಲಿಂದು 15,754 ಹೊಸ ಪ್ರಕರಣ, ಸೋಂಕಿನಿಂದ 47 ಜನರು ಸಾವು

Nagaraja AB

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 15,754 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,14, 618 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇಂದು ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳು 1,01,830ಕ್ಕೆ ಇಳಿಕೆಯಾಗಿದೆ. 

ಇದೇ ಅವಧಿಯಲ್ಲಿ  47 ಜನರು ಸೋಂಕಿನಿಂದ ಮೃತಪಟ್ಟಿದ್ದು, ಈ ಪೈಕಿ ಕೇರಳವೊಂದರಲ್ಲೇ ಅಧಿಕ 8 ಜನರು ಸಾವಿಗೀಡಾಗಿದ್ದಾರೆ. ಈವರೆಗೆ 5,27,253 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.23ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರ ಶೇ 98.58ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 3.48ರಷ್ಟಿದೆ.

SCROLL FOR NEXT