ಸಾಂದರ್ಭಿಕ ಚಿತ್ರ 
ದೇಶ

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಆರು ಮಂದಿ ಬಲಿ, 20 ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಮೋದಿ ಸಂತಾಪ

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಜೀವ ಕಳೆದುಕೊಂಡಿದ್ದಾರೆ ಎಂದು ಸುಮೇರ್‌ಪುರ ಪೊಲೀಸ್ ಠಾಣೆ ಪ್ರಭಾರಿ ರಾಮೇಶ್ವರ ಭಾಟಿ  ಹೇಳಿದ್ದಾರೆ.

ಯಾತ್ರಾರ್ಥಿಗಳು ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯದಿಂದ ಹಿಂದಿರುಗುತ್ತಿದ್ದ ವೇಳೆ  ಈ ಅವಘಡ ಸಂಭವಿಸಿದೆ. ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನದ ಪಾಲಿಯಲ್ಲಿ ಸಂಭವಿಸಿದ ಅಪಘಾತ ದುಃಖಕರವಾಗಿದೆ. ಈ ದುಃಖತಪ್ತ ಕುಟುಂಬಗಳೊಂದಿಗೆ ನಾವಿದ್ದೇವೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ