ಕೈಲಾಶ್ ವಿಜಯವರ್ಗಿಯ 
ದೇಶ

'ಹುಡುಗಿರು ಬಾಯ್‌ಫ್ರೆಂಡ್ಸ್ ಬದಲಿಸಿದಂತೆ, ನಿತೀಶ್ ಕುಮಾರ್':? ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿಜಯವರ್ಗಿಯಾ

ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ವ್ಯಂಗ್ಯವಾಡಿದ್ದಾರೆ.

ಇಂದೋರ್: ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ತೊರೆದು ಬಿಹಾರದಲ್ಲಿ ಮಹಾಘಟಬಂಧನ್ ಸರ್ಕಾರ ರಚನೆ ಬಗ್ಗೆ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ವ್ಯಂಗ್ಯವಾಡಿದ್ದಾರೆ.

ನನ್ನ ವಿದೇಶಿ ಸ್ನೇಹಿತನೊಬ್ಬ ಅವರ ದೇಶದಲ್ಲಿ 'ಹುಡುಗಿರು ಆಗಾಗೆ ಬಾಯ್‌ಫ್ರೆಂಡ್ಸ್ ಗಳನ್ನು ಬದಲಿಸುತ್ತಾರೆ ಎಂದು ಹೇಳಿದ್ದು ಅದೇ ರೀತಿ ಬಿಹಾರದ ಮುಖ್ಯಮಂತ್ರಿ (ನಿತೀಶ್ ಕುಮಾರ್) ಅವರು ಯಾವಾಗ ಹೊಸ ಸಂಬಂಧಕ್ಕೆ ಪ್ರವೇಶಿಸುತ್ತಾರೆ ಎಂದು ಹೇಳುವುದು ಕಷ್ಟ ಎಂದು ಹೇಳಿದ್ದಾರೆ.

ವಿಜಯವರ್ಗಿಯಾ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಪಕ್ಷಗಳು ಕಿಡಿಕಾರುತ್ತಿದ್ದಂತೆ ಇಂದು ವಿಜಯವರ್ಗಿಯಾ ಅವರು ಮಹಿಳೆಯರ ಬಗ್ಗೆ ಅಪಾರ ಗೌರವವಿದೆ. ಬಿಹಾರದಲ್ಲಿನ ಇತ್ತೀಚಿನ ರಾಜಕೀಯ ಬೆಳವಣಿಗೆಯ ಹಿನ್ನೆಲೆಯಲ್ಲಿ ಅವರು ಕೇವಲ ವಿದೇಶಿ ಸ್ನೇಹಿತನ ಮಾತನ್ನು ಉಲ್ಲೇಖಿಸಿದ್ದಾಗಿ, ಆಕ್ಷೇಪಾರ್ಹ ಪದಗಳನ್ನು ಹೇಳಲಿಲ್ಲ ಎಂದು ಹೇಳಿದರು.

ಬಿಹಾರದಲ್ಲಿ(ಜೆಡಿಯು-ಬಿಜೆಪಿಯ) ಸರ್ಕಾರ ಬದಲಾದಾಗ ನಾನು ವಿದೇಶದಲ್ಲಿದ್ದೆ. ಈ ವಿಷಯದ ಬಗ್ಗೆ ಅಲ್ಲಿನ ವ್ಯಕ್ತಿಯೊಬ್ಬರು ನನಗೆ ಹೇಳಿದ್ದರು. ಅಲ್ಲಿ ಹುಡುಗಿಯರು ತಮ್ಮ ಬಾಯ್‌ಫ್ರೆಂಡ್‌ಗಳನ್ನು ಆಗಾಗ್ಗೆ ಬದಲಾಯಿಸುತ್ತಾರೆ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ನಿತೀಶ್ ಕುಮಾರ್ ಮಿತ್ರ ಪಕ್ಷ ಬಿಜೆಪಿಯೊಂದಿಗಿನ ಸಂಬಂಧವನ್ನು ಮುರಿದುಕೊಂಡು ಮುಖ್ಯಮಂತ್ರಿಯಾಗಿ ಉಳಿಯಲು ಕಾಂಗ್ರೆಸ್ ಮತ್ತು ಎಡ ಪಕ್ಷಗಳನ್ನು ಒಳಗೊಂಡಿರುವ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ನೇತೃತ್ವದ ಮಹಾ ಮೈತ್ರಿಕೂಟದೊಂದಿಗೆ ಕೈಜೋಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ