ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 11,539 ಹೊಸ ಪ್ರಕರಣ, 34 ಜನರು ಸೋಂಕಿನಿಂದ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 11,539 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,39,429 ಕ್ಕೆ ಏರಿಕೆಯಾಗಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 11,539 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,39,429 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 99,879ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 34 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೂ ದೇಶದಲ್ಲಿ 5,27,332 ಜನರು ಮೃತಪಟ್ಟಿದ್ದಾರೆ. ಇಂದು ಕೇರಳವೊಂದರಲ್ಲೇ  9 ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.23ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.59ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ 3.75 ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ.

ಈವರೆಗೂ ಸೋಂಕಿನಿಂದ 4,37,12,218 ಜನರು ಗುಣಮುಖರಾಗಿದ್ದಾರೆ. ದೇಶದಾದ್ಯಂತ ಲಸಿಕೆ ಅಭಿಯಾನದಡಿ 209.67 ಕೋಟಿ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ