ಸಾಂದರ್ಭಿಕ ಚಿತ್ರ 
ದೇಶ

ಅವರು ಗಾಂಜಾ ಸೇವಿಸಿದ್ದಾರೆಯೇ?: ಪಕ್ಷಕ್ಕೆ ಆಹ್ವಾನ ನೀಡಿದೆ ಎಂದ ಮನೀಶ್ ಸಿಸೋಡಿಯಾ ವಿರುದ್ಧ ಬಿಜೆಪಿ

ಕೇಸರಿ ಪಕ್ಷವು ತನ್ನನ್ನು ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದೆ ಮತ್ತು ಅದಕ್ಕೆ ಬದಲಾಗಿ ತನ್ನ ವಿರುದ್ಧದ ಎಲ್ಲಾ ಇ.ಡಿ ಮತ್ತು ಸಿಬಿಐ ಪ್ರಕರಣಗಳನ್ನು ತೆಗೆದುಹಾಕಲಾಗುತ್ತದೆ ಎಂದಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಡಿದ್ದ ಆರೋಪವನ್ನು ಬಿಜೆಪಿ ನಿರಾಕರಿಸಿದೆ.

ನವದೆಹಲಿ: ಕೇಸರಿ ಪಕ್ಷವು ತನ್ನನ್ನು ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದೆ ಮತ್ತು ಅದಕ್ಕೆ ಬದಲಾಗಿ ತನ್ನ ವಿರುದ್ಧದ ಎಲ್ಲಾ ಇ.ಡಿ ಮತ್ತು ಸಿಬಿಐ ಪ್ರಕರಣಗಳನ್ನು ತೆಗೆದುಹಾಕಲಾಗುತ್ತದೆ ಎಂದಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾಡಿದ್ದ ಆರೋಪವನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ನಿರಾಕರಿಸಿದೆ.

ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಪರ್ವೇಶ್ ವರ್ಮಾ, 'ಮನೀಶ್ ಸಿಸೋಡಿಯಾ ಅವರು ಪ್ರತಿದಿನ ಬೆಳಗ್ಗೆ ಪ್ರಾಣಾಯಾಮ ಮಾಡಬೇಕು. ಅವರು ಭಾಂಗ್ (ಗಾಂಜಾ) ಸೇವಿಸಿದ್ದಾರೆಯೇ? ಬಿಜೆಪಿಗೆ ಸೇರಲು ಹೇಳಿದ ವ್ಯಕ್ತಿಯ ಹೆಸರನ್ನು ಅವರು ಬಹಿರಂಗಪಡಿಸಬೇಕು. ಅವರು ತಮ್ಮ ಮೂಗನ್ನು ನೆಲಕ್ಕೆ ಉಜ್ಜಿದರೂ ಕೂಡ, ಬಿಜೆಪಿ ಅವರನ್ನು ಸೇರಿಸಿಕೊಳ್ಳುವುದಿಲ್ಲ' ಎಂದಿದ್ದಾರೆ.

ಹೊಸ ಅಬಕಾರಿ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಿಬಿಐನಿಂದ ತನಿಖೆಯನ್ನು ಎದುರಿಸುತ್ತಿರುವ ಮನೀಶ್ ಸಿಸೋಡಿಯಾ ಅವರು, ಆಮ್ ಆದ್ಮಿ ಪಕ್ಷವನ್ನು ತೊರೆದು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಬಿಜೆಪಿಯಿಂದ ಸಂದೇಶ ಬಂದಿದೆ. ಒಂದು ವೇಳೆ ಪಕ್ಷಕ್ಕೆ ಸೇರಿಕೊಂಡರೆ, ಅವರ ವಿರುದ್ಧದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಎಲ್ಲಾ ಪ್ರಕರಣಗಳನ್ನು ತೆಗೆದುಹಾಕುವುದಾಗಿ ಹೇಳಿದ್ದಾರೆ ಎಂದು ಆರೋಪಿಸಿದ್ದರು. ಈ ಸಂದೇಶವನ್ನು ಟ್ವೀಟ್ ಮಾಡಿದ್ದ ಅವರು, ಬಿಜೆಪಿಗೆ ಸೇರುವುದಕ್ಕಿಂತ ತಲೆ ಕಡಿಯುವುದೇ ಲೇಸು ಎಂದಿದ್ದರು.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪದ ಮೇಲೆ ಸಿಸೋಡಿಯಾ ಅವರ ನಿವಾಸದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಸುಮಾರು 15 ಗಂಟೆಗಳ ಕಾಲ ದಾಳಿ ನಡೆಸಿತ್ತು.

ಸಿಸೋಡಿಯಾ ಅವರು ತಮ್ಮ ಮೇಲಿನ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಅವರ ಪ್ರಕಾರ ತಾವು ಮಾಡಿರುವ ಏಕೈಕ ಅಪರಾಧವೆಂದರೆ ಅದು ಕೇಜ್ರಿವಾಲ್ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿರುವುದು. 'ಅವರ ಸಮಸ್ಯೆ ಮದ್ಯ/ಅಬಕಾರಿ ಹಗರಣವಲ್ಲ. ಅವರ ಸಮಸ್ಯೆ ಎಂದರೆ ಅರವಿಂದ್ ಕೇಜ್ರಿವಾಲ್. ನಾನು ಯಾವುದೇ ಭ್ರಷ್ಟಾಚಾರ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ನಾನು ಕೇವಲ ಅರವಿಂದ್ ಕೇಜ್ರಿವಾಲ್ ಸಂಪುಟದಲ್ಲಿ ಶಿಕ್ಷಣ ಸಚಿವ' ಎಂದು ಸಿಸೋಡಿಯಾ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ