ಜೈರಾಮ್ ರಮೇಶ್, ದಿಗ್ವಿಜಯ್ ಸಿಂಗ್ 
ದೇಶ

ಸೆಪ್ಟೆಂಬರ್ 7 ರಿಂದ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ; ಲೋಗೋ, ಭಿತ್ತಿಪತ್ರ ಬಿಡುಗಡೆ

ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ 'ಭಾರತ್ ಜೋಡೋ ಯಾತ್ರೆ'ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದೆ.

ನವದೆಹಲಿ: ಸೆಪ್ಟೆಂಬರ್ 7 ರಿಂದ ಆರಂಭವಾಗಲಿರುವ 'ಭಾರತ್ ಜೋಡೋ ಯಾತ್ರೆ'ಯ ಲೋಗೋ, ಘೋಷಣೆ ಹಾಗೂ ಭಿತ್ತಿಪತ್ರವನ್ನು ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದೆ.

ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜೈರಾಮ್ ರಮೇಶ್, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡರು.ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೈ ರಾಮ್ ರಮೇಶ್, ಈ ಸಂಬಂಧ ವೆಬ್ ಸೈಟ್ ವೊಂದನ್ನು ಕೂಡಾ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು. 

ಈ ವೆಬ್ ಸೈಟ್ ನಲ್ಲಿ ಯಾತ್ರೆಯ ಲೈವ್ ಸ್ಟ್ರಿಮಿಂಗ್ ದೊರೆಯಲಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜವನ್ನು ಬಳಸುವುದಿಲ್ಲ, ಬದಲಿಗೆ ತ್ರಿವರ್ಣ ಧ್ವಜ ಬಳಸಲಿದ್ದಾರೆ ಎಂದು ಎಂದು ದಿಗ್ವಿಜಯ್ ಸಿಂಗ್ ಹೇಳಿದರು.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್ ಜೋಡೋ ಯಾತ್ರೆ ನಡೆಯಲಿದೆ. 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಈ ಯಾತ್ರೆ ನಡೆಯಲಿದ್ದು, ನಾಗರಿಕ ಸಮಾಜ ಸಂಸ್ಥೆಗಳು ಮತ್ತು ಸಮಾನ ಮನಸ್ಕರು ಈ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!

Yamuna Expressway ದುರಂತ: ನೀವು ಸತ್ತರೂ ಚಿಂತೆಯಿಲ್ಲ, ಬಸ್ ಮಾತ್ರ ನಿಲ್ಲಿಸಲ್ಲ: ಪ್ರಯಾಣಿಕರ ಎಚ್ಚರಿಕೆ ನಿರ್ಲಕ್ಷಿಸಿ 9 ಜನರ ಸಾವಿಗೆ ಕಾರಣವಾದ ಚಾಲಕ..!

ಕಾವೇರಿ ಜಲ ವಿವಾದ: ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಶಾಕ್; CWMA ಆದೇಶ ಪಾಲಿಸುವಂತೆ ಸೂಚನೆ, ಅ.12ಕ್ಕೆ ವಿಚಾರಣೆ ಮುಂದೂಡಿಕೆ..!

ಮೈಸೂರು ದಸರಾ: ಜಿಲ್ಲಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಡಿಸಿಎಂ ತವರು ತುಮಕೂರಿಗೆ ಅವಕಾಶವೇ ಇಲ್ಲ; ಭುಗಿಲೆದ್ದ ಆಕ್ರೋಶ!

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ