ರಾಜಾ ಸಿಂಗ್ 
ದೇಶ

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆ: ತೆಲಂಗಾಣ ಬಿಜೆಪಿ ಶಾಸಕ ರಾಜಾ ಸಿಂಗ್ ಪಕ್ಷದಿಂದ ಅಮಾನತು

ಪ್ರವಾದಿ ಮುಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಹೈದರಾಬಾದ್: ಪ್ರವಾದಿ ಮುಹಮ್ಮದ್ ಅವರನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಪ್ರವಾದಿ ಮುಹಮ್ಮದ್ ಅವರ ಕುರಿತು ವಿವಾದಾತ್ಮಕ ಹೇಳಿಕೆಯ ನಂತರ ರಾಜಾ ಸಿಂಗ್ ಅವರ ವಿರುದ್ಧ ತೀವ್ರ ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನೆ ಮತ್ತು ಜನರ ಅಸಮಾಧಾನವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಬಿಜೆಪಿ ಶಾಸಕನ ವಿರುದ್ಧ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಇಂದು ಅವರನ್ನು ಬಂಧಿಸಿದ್ದರು. 

ಬಂಧನಕ್ಕೊಳಗಾಗಿರುವ ರಾಜಾ ಸಿಂಗ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನಗೊಳಿಸಿದೆ.

'ನೀವು(ರಾಜಾ ಸಿಂಗ್) ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ. ಇದು ಭಾರತೀಯ ಜನತಾ ಪಕ್ಷದ ನಿಯಮವನ್ನು ಸ್ಪಷ್ಟವಾಗಿ ಉಲ್ಲಂಘಿಸುತ್ತದೆ. ನಿಮ್ಮನ್ನು ಪಕ್ಷದಿಂದ ಮತ್ತು ನಿಮ್ಮ ಜವಾಬ್ದಾರಿಗಳು/ನಿಯೋಜನೆಗಳು ಯಾವುದಾದರೂ ಇದ್ದರೆ ಅದರಿಂದ ತಕ್ಷಣವೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ಅವರು ಪ್ರಕಟೆಯಲ್ಲಿ ತಿಳಿಸಿದ್ದಾರೆ.

ನಿಮ್ಮನ್ನು ಪಕ್ಷದಿಂದ ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ 10 ದಿನಗಳೊಳಗೆ ಕಾರಣವನ್ನು ನೀಡಬೇಕು ಎಂದು ಪಾಠಕ್ ಅವರು ರಾಜಾ ಸಿಂಗ್ ಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT