ದೇಶ

ಸಿಬಿಐ 2-3 ದಿನಗಳಲ್ಲಿ ಮನೀಶ್ ಸಿಸೋಡಿಯಾ ಬಂಧಿಸಲಿದೆ: ದೆಹಲಿ ಸಿಎಂ ಕೇಜ್ರಿವಾಲ್

Lingaraj Badiger

ಭಾವನಗರ: ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮುಂದಿನ ಕೆಲವೇ ದಿನಗಳಲ್ಲಿ ಸಿಬಿಐ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಗುಜರಾತ್‌ನ ಭಾವನಗರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು, "ಮುಂದಿನ 10 ದಿನಗಳಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುತ್ತಾರೆ ಎಂದು ನಾವು ಕೇಳಿದ್ದೇವೆ. ಆದರೆ ಇನ್ನು 2-3 ದಿನಗಳಲ್ಲಿ ಅವರನ್ನು ಬಂಧಿಸುತ್ತಾರೆ ಅಂತ ಅನಿಸುತ್ತಿದೆ" ಎಂದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಅರವಿಂದ್ ಕೇಜ್ರಿವಾಲ್ ಮತ್ತು ಡಿಸಿಎಂ ಮನೀಶ್ ಸಿಸೋಡಿಯಾ ಅವರು ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಿದ್ದಾರೆ.

ಏತನ್ಮಧ್ಯೆ, ನಗರದಲ್ಲಿ 'ಅಭಿವೃದ್ಧಿ' ಕುರಿತು ಮಾತನಾಡಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, "ನಾವು 2 ಲಕ್ಷ ಸರ್ಕಾರಿ ಉದ್ಯೋಗಗಳು ಮತ್ತು 10 ಲಕ್ಷ ಖಾಸಗಿ ಉದ್ಯೋಗಗಳನ್ನು ನೀಡಿದ್ದೇವೆ... ದೇಶಾದ್ಯಂತ ಎಎಪಿ ಕುರಿತ ಜನರ ಉತ್ಸಾಹ ವೇಗವಾಗಿ ಬೆಳೆಯುತ್ತಿರುವುದನ್ನು ಕಂಡು ನನ್ನ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಆದರೆ ನಾನು ಪ್ರಾಮಾಣಿಕ ವ್ಯಕ್ತಿ ಮತ್ತು ಸಿಬಿಐಗೆ ಹೆದರುವುದಿಲ್ಲ ಎಂದು ಹೇಳಿದರು.

SCROLL FOR NEXT