ಅನಿಲ್ ಅಂಬಾನಿಗೆ ಪ್ರಾಸಿಕ್ಯೂಷನ್ ನೊಟೀಸ್ ಜಾರಿಗೊಳಿಸಿದ ಐಟಿ
ಆದಾಯ ತೆರಿಗೆ ಇಲಾಖೆ ರಿಲಾಯನ್ಸ್ ಸಮೂಹಗಳ ಅಧ್ಯಕ್ಷ ಅನಿಲ್ ಅಂಬಾನಿ ಅವರ ವಿರುದ್ಧ ಕಪ್ಪು ಹಣ ಕಾಯ್ದೆಯಡಿ ಮೊಕದ್ದಮೆ ಹೂಡಲು ನೊಟೀಸ್ ಜಾರಿ ಮಾಡಿದೆ.
ಮುಂಬೈ: ಆದಾಯ ತೆರಿಗೆ ಇಲಾಖೆ ರಿಲಾಯನ್ಸ್ ಸಮೂಹಗಳ ಅಧ್ಯಕ್ಷ ಅನಿಲ್ ಅಂಬಾನಿ ಅವರ ವಿರುದ್ಧ ಕಪ್ಪು ಹಣ ಕಾಯ್ದೆಯಡಿ ಮೊಕದ್ದಮೆ ಹೂಡಲು ನೊಟೀಸ್ ಜಾರಿ ಮಾಡಿದೆ.
420 ಕೋಟಿ ರೂಪಾಯಿ ತೆರಿಗೆ ವಂಚನೆ ಹಾಗೂ ಸ್ವಿಸ್ ಬ್ಯಾಂಕ್ ನಲ್ಲಿರುವ 814 ಕೋಟಿಗೂ ಹೆಚ್ಚಿನ ಬಹಿರಂಗಪಡಿಸದ ಹಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಉದ್ದೇಶಪೂರ್ವಕವಾಗಿ ಅಂಬಾನಿ ಅವರು ವಿದೇಶಿ ಬ್ಯಾಂಕ್ ನಲ್ಲಿರುವ ಹಣದ ಬಗ್ಗೆ ಮಾಹಿತಿ ನೀಡಲಿಲ್ಲ ಎಂದು ಐಟಿ ಇಲಾಖೆ ಆರೋಪಿಸಿದೆ. ಇದೇ ವಿಷಯವಾಗಿ ಆಗಸ್ಟ್ ಪ್ರಾರಂಭದಲ್ಲಿ ಅಂಬಾನಿಗೆ ಶೋಕಾಸ್ ನೊಟೀಸ್ ನ್ನೂ ಜಾರಿಗೊಳಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.