ಸೋನಿಯಾ ಗಾಂಧಿ 
ದೇಶ

ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿರುವ ಸೋನಿಯಾ ಗಾಂಧಿ: ಪ್ರಿಯಾಂಕಾ, ರಾಹುಲ್ ಸಾಥ್!

ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್‌  ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್‌  ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಹೇಳಿದ್ದಾರೆ.

ಆದರೆ ಯಾವಾಗ ಹೋಗುತ್ತಿದ್ದಾರೆ ಅಥವಾ ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್‌ 4ರಂದು ರಾಹುಲ್‌ ಗಾಂಧಿ ಅವರು 'ಮೆಹಂಗಾಯಿ ಪರ್‌ ಹಲ್ಲಾ ಬೋಲ್‌' ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

'ವೈದ್ಯಕೀಯ ಪರೀಕ್ಷೆಗೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿದೇಶಕ್ಕೆ ತೆರಳಲಿದ್ದಾರೆ. ನವದೆಹಲಿಗೆ ವಾಪಸ್‌ ಆಗುವ ಮುನ್ನ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲಿದ್ದಾರೆ. ಸೋನಿಯಾ ಅವರ ಜೊತೆ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಹೋಗುತ್ತಿದ್ದಾರೆ. ಸೆಪ್ಚೆಂಬರ್‌ 4ರಂದು 'ಮೆಹಂಗಾಯಿ ಪರ್‌ ಹಲ್ಲಾ ಬೋಲ್‌' ಅಭಿಯಾನವನ್ನು ಉದ್ದೇಶಿಸಿ ರಾಹುಲ್‌ ಗಾಂಧಿ ಭಾಷಣ ಮಾಡಲಿದ್ದಾರೆ' ಎಂದು ಜೈರಾಮ್‌ ರಮೇಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT