ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 10,725 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,725 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,78,920 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 94,047 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,725 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,78,920 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ 94,047 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಗುರುವಾರ ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ 26 ಜನರು ಸೋಂಕಿನಿಂದ ಸಾವಿಗೀಡಾಗಿದ್ದು, ಈ ಪೈಕಿ ಕೇರಳದಲ್ಲೇ ಐವರು ಮೃತಪಟ್ಟಿದ್ದಾರೆ. ಈವರೆಗೆ ದೇಶದಲ್ಲಿ5,27,488 ಜನರು ಕೊರೊನಾವೈರಸ್ ಸೋಂಕಿನಿಂದಾಗಿ ಪ್ರಾಣಕಳೆದುಕೊಂಡಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 1.21ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.60ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೆ 4,37,57,385 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ದೈನಂದಿನ ಪಾಸಿಟಿವಿಟಿ ದರ 2.73ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 3.20ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಈವರೆಗೆ 210.82 ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

SCROLL FOR NEXT