ದೇಶ

ಗುಲಾಂ ನಬಿ ಆಜಾದ್ ಬೆನ್ನಲ್ಲೇ ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ ಐವರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ!

Srinivasamurthy VN

ಶ್ರೀನಗರ: ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಜಾದ್ ಪಕ್ಷಕ್ಕೆ ಗುಡ್ ಬೈ ಹೇಳಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ನಾಯಕರ ಸರಣಿ ರಾಜಿನಾಮೆ ಪರ್ವ ಆರಂಭವಾಗಿದ್ದು, ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿ 5 ಕಾಂಗ್ರೆಸ್ ನಾಯಕರು ಪಕ್ಷಕ್ಕೆ ರಾಜಿನಾಮೆ ನೀಡಿದ್ದಾರೆ.

ಹೌದು.. ಕಾಂಗ್ರೆಸ್ ಪಕ್ಷದ ಕಟ್ಟಾ ಕಾರ್ಯಕರ್ತರಾಗಿದ್ದ ಗುಲಾಂ ನಬಿ ಆಜಾದ್ ಅವರು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವವೂ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಪಕ್ಷದಿಂದ ಹೊರಬಂದಿದ್ದು, ಇದೀಗ ಅವರ ರಾಜಿನಾಮೆ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.

ಪ್ರಮುಖವಾಗಿ ಆಜಾದ್, ತಮ್ಮ ರಾಜೀನಾಮೆಗೆ ರಾಹುಲ್ ಗಾಂಧಿಯೇ ಕಾರಣ ಎಂದು ಸೋನಿಯಾ ಗಾಂಧಿಗೆ ಪತ್ರವನ್ನೂ ಬರೆದಿದ್ದು, ರಾಹುಲ್ ಗಾಂಧಿಯವರ ಕಟು ಟೀಕೆಯೊಂದಿಗೆ ಇಂದು ಕಾಂಗ್ರೆಸ್ ತೊರೆದಿರುವ ಗುಲಾಂ ನಬಿ ಆಜಾದ್ ಜಮ್ಮು ಕಾಶ್ಮೀರದಲ್ಲಿ ಹೊಸ ಪಕ್ಷವನ್ನು ಪ್ರಾರಂಭಿಸುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿಯಾಗಿರುವ ಗುಲಾಂ ನಬಿ ಆಜಾದ್ ತಮ್ಮ ತವರು ನೆಲದಲ್ಲಿ ತಮ್ಮ ಹೊಸ ಪಕ್ಷವನ್ನು ಪ್ರಾರಂಭಿಸಲು ಬಯಸಿದ್ದಾರೆ ಎನ್ನುವ ಊಹಾಪೋಹಗಳ ನಡುವೆಯೇ ಹಲವು ನಾಯಕರು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದಾರೆ.

ಮಾಜಿ ಸಚಿವ ಆರ್ ಎಸ್ ಚಿಬ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ GM ಸರೂರಿ, ಹಾಜಿ ಅಬ್ದುಲ್ ರಶೀದ್, ಮೊಹಮ್ಮದ್ ಅಮೀನ್ ಭಟ್, ಗುಲ್ಜಾರ್ ಅಹ್ಮದ್ ವಾನಿ ಮತ್ತು ಚೌಧರಿ ಮೊಹಮ್ಮದ್ ಅಕ್ರಮ್ "ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ" ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

SCROLL FOR NEXT