ಸಾಂದರ್ಭಿಕ ಚಿತ್ರ 
ದೇಶ

ರಾಷ್ಟ್ರೀಯ ಪಕ್ಷಗಳಿಂದ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077 ಕೋಟಿ ರೂ. ಸಂಗ್ರಹ!

ರಾಷ್ಟ್ರೀಯ ರಾಜಕೀಯ ಪಕ್ಷಗಳು 2004-05 ರಿಂದ 2020-21ರ ನಡುವೆ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077.97 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಸಂಗ್ರಹಿಸಿವೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್...

ನವದೆಹಲಿ: ರಾಷ್ಟ್ರೀಯ ರಾಜಕೀಯ ಪಕ್ಷಗಳು 2004-05 ರಿಂದ 2020-21ರ ನಡುವೆ ಅಪರಿಚಿತ ಮೂಲಗಳಿಂದ ಬರೋಬ್ಬರಿ 15,077.97 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಸಂಗ್ರಹಿಸಿವೆ ಎಂದು ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಹಿರಂಗಪಡಿಸಿದೆ.

2020-21ರಲ್ಲಿ ಅಪರಿಚಿತ ಮೂಲಗಳಿಂದ ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳ ಒಟ್ಟು ಆದಾಯ 690.67 ಕೋಟಿ ರೂಪಾಯಿ ನಿಧಿ ಸಂಗ್ರಹಿಸಿವೆ.

ಈ ವಿಶ್ಲೇಷಣೆಗಾಗಿ ಎಡಿಆರ್ ಎಂಟು ರಾಷ್ಟ್ರೀಯ ಪಕ್ಷಗಳು ಮತ್ತು 27 ಪ್ರಾದೇಶಿಕ ಪಕ್ಷಗಳ ವರದಿಯನ್ನು ಅಧ್ಯಯನ ಮಾಡಿದೆ. 

ರಾಷ್ಟ್ರೀಯ ಪಕ್ಷಗಳಾದ ಭಾರತೀಯ ಜನತಾ ಪಕ್ಷ(ಬಿಜೆಪಿ), ಭಾರತೀಯ ರಾಷ್ಟ್ರೀಯ ಕಾಂಗ್ರೆಸ್(ಐಎನ್‌ಸಿ), ಅಖಿಲ ಭಾರತ ತೃಣಮೂಲ ಕಾಂಗ್ರೆಸ್(ಎಐಟಿಸಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಮಾರ್ಕ್ಸ್‌ವಾದಿ) (ಸಿಪಿಎಂ), ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ), ಬಹುಜನ ಸಮಾಜ ಪಕ್ಷ(ಬಿಎಸ್‌ಪಿ), ನ್ಯಾಷನಲ್ ಪೀಪಲ್ಸ್ ಪಾರ್ಟಿ ಮಾಹಿತಿಯನ್ನು ಎಡಿಆರ್ ಕಲೆ ಹಾಕಿ ಈ ವರದಿ ಬಿಡುಗಡೆ ಮಾಡಿದೆ.

ಇನ್ನು ಹಲವು ಪ್ರಾದೇಶಿಕ ಪಕ್ಷಗಳಾದ ಆಪ್, ಎಐಎಡಿಎಂಕೆ, ಜೆಡಿಎಸ್, ಜೆಡಿಯು, ಎಐಎಂಐಎಂ, ಸಮಾಜವಾದಿ ಪಾರ್ಟಿ, ಶಿವಸೇನಾ ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಆದಾಯ ತೆರಿಗೆ ಇಲಾಖೆಗೆ ನೀಡಿರುವ ಮಾಹಿತಿಯನ್ನು ಹೆಕ್ಕಿ ತೆಗೆಯಲಾಗಿದೆ. 

ರಾಜಕೀಯ ಪಕ್ಷಗಳ ಆದಾಯ ತೆರಿಗೆ ರಿಟರ್ನ್ಸ್(ITR) ಸಲ್ಲಿಕೆ ಮತ್ತು ಭಾರತೀಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೇಣಿಗೆಯ ವಿವರಗಳ ಆಧಾರದ ಮೇಲೆ ಈ ವರದಿ ಸಿದ್ಧಪಡಿಸಲಾಗಿದ್ದು, 2004-05 ರಿಂದ 2020-21 ರ ನಡುವೆ ರಾಷ್ಟ್ರೀಯ ಪಕ್ಷಗಳು 15,077.97 ಕೋಟಿ ರೂ. ಅಪರಿಚಿತ ಮೂಲಗಳು ಸಂಗ್ರಹಿಸಿವೆ.

2020-21ನೇ ಹಣಕಾಸು ವರ್ಷದಲ್ಲಿ ಎಂಟು ರಾಷ್ಟ್ರೀಯ ಪಕ್ಷಗಳು ಅಪರಿಚಿತ ಮೂಲಗಳಿಂದ ರೂ 426.74 ಕೋಟಿ ಹಣ ಸಂಗ್ರಹಿಸಿವೆ ಮತ್ತು 27 ಪ್ರಾದೇಶಿಕ ಪಕ್ಷಗಳು 263.928 ಕೋಟಿ ರೂಪಾಯಿ ನಿಧಿಯನ್ನು ಅಪರಿಚಿತ ಮೂಲಗಳಿಂದ ಪಡೆದಿವೆ" ಎಂದು ಎಡಿಆರ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?