ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 9,250 ಹೊಸ ಪ್ರಕರಣ ಪತ್ತೆ; ಕೇರಳದಲ್ಲಿ ನಾಲ್ಕು ಸೇರಿ 41 ಜನರು ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,250 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,98,696ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,311ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,250 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,43,98,696ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 87,311ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಬೆಳಗ್ಗೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ ನಾಲ್ವರು ಸೇರಿದಂತೆ 41 ಜನರು ಸಾವಿಗೀಡಾಗಿದ್ದು, ದೇಶದಲ್ಲಿ ಈವರೆಗೆ 5,27,597 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.20ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಚೇತರಿಕೆ ದರವು ಶೇ 98.62ರಷ್ಟಿದೆ. ಈವರೆಗೆ 4,37,83,788 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 2.50ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19 ರಷ್ಟಿದೆ. ಇನ್ನು ವಾರದ ಪಾಸಿಟಿವಿಟಿ ದರ 2.80 ರಷ್ಟಿದೆ.

ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 211.91 ಕೋಟಿ ಕೋವಿಡ್ ವಿರುದ್ಧದ ಲಸಿಕೆ ಡೋಸ್‌ಗಳನ್ನು ವಿಚರಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!