ಪ್ರಾತಿನಿಧಿಕ ಚಿತ್ರ 
ದೇಶ

ಎಎಪಿ ರಾಜಕೀಯಕ್ಕಾಗಿ ವಿಶ್ವಾಸ ಮತವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ: ಕೇಜ್ರಿವಾಲ್ ವಿರುದ್ಧ ಬಿಜೆಪಿ ಕಿಡಿ

ಆಮ್ ಆದ್ಮಿ ಪಕ್ಷ (ಎಎಪಿ) ರಾಜಕೀಯದಲ್ಲಿ ತೊಡಗಿದೆ ಮತ್ತು ವಿಶ್ವಾಸ ಮತದ ನಿಬಂಧನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಭಾರತೀಯ ಜನತಾ ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ.

ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ರಾಜಕೀಯದಲ್ಲಿ ತೊಡಗಿದೆ ಮತ್ತು ವಿಶ್ವಾಸ ಮತದ ನಿಬಂಧನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಭಾರತೀಯ ಜನತಾ ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ.

ಉಪಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ವಿರುದ್ಧ ಸಿಬಿಐ ದಾಳಿ ನಡೆಸಿದ ಬಳಿಕ ಸಿಡಿದೆದ್ದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಇಂದು ನಡೆಯುವ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತಯಾಚನೆ ಮಾಡಲಿದ್ದಾರೆ. ದೆಹಲಿಯಲ್ಲಿ ಪಕ್ಷದ ಸರ್ಕಾರವನ್ನು ಉರುಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಹಿನ್ನೆಲೆಯಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂಬುದನ್ನು ಸಾಭೀತುಪಡಿಸಲು ಕೇಜ್ರಿವಾಲ್ ಮುಂದಾಗಿದ್ದಾರೆ.

'ಸರ್ಕಾರವು ಬಹುಮತ ಸಾಬೀತುಪಡಿಸಲು ಯಾರೂ ಕೇಳದಿರುವಾಗ, ನೀವು ಏಕೆ ಬಹುಮತ ಸಾಬೀತುಪಡಿಸುತ್ತಿದ್ದೀರಿ? ಕೇಜ್ರಿವಾಲ್ ಕೇವಲ ರಾಜಕೀಯ ಮಾಡುತ್ತಿದ್ದಾರೆ ಮತ್ತು ಇದಕ್ಕಾಗಿ ಶಾಸಕಾಂಗದ ನಿಬಂಧನೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ' ಎಂದು ಬಿಜೆಪಿ ಮೂಲಗಳು ತಿಳಿಸಿವೆ.

'ವಿಶ್ವಾಸ ಮತವು ಶಾಸಕಾಂಗದ ಅತ್ಯಗತ್ಯ ನಿಬಂಧನೆಯಾಗಿದ್ದು, ಅದು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಬಹುಮತವಿದೆಯೇ ಅಥವಾ ಇಲ್ಲವೇ ಎಂಬುದನ್ನು ತೋರಿಸುತ್ತದೆ. ರಾಜಕೀಯ ಅಸ್ಥಿರತೆಯ ಬೆದರಿಕೆ ಇರುವಾಗ ಮಾತ್ರ ಇದು ಅತ್ಯಂತ ಮುಖ್ಯವಾಗಿದೆ. ಇದು ಪ್ರತಿಪಕ್ಷಗಳ ಆಜ್ಞೆಯ ಮೇರೆಗೆ ಅಲ್ಲ. ಸರ್ಕಾರದ ಇಚ್ಛೆಯ ಮೇರೆಗೆ' ಎಂದು ಕೇಸರಿ ಪಕ್ಷ ಆರೋಪಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದು, ಎಎಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ವಿಶ್ವಾಸ ಮತ ಯಾಚನೆ ಮಾಡುತ್ತಿರುವುದು 'ಅಬಕಾರಿ ಹಗರಣ ಮತ್ತು ಶಿಕ್ಷಣ ಹಗರಣಗಳಿಂದ ಗಮನವನ್ನು ಸೆಳೆಯುವ ಹತಾಶ ತಂತ್ರವಾಗಿದೆ' ಎಂದು ಬಣ್ಣಿಸಿದ್ದಾರೆ.

ದೆಹಲಿ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನ ಎಎಪಿ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ, 'ಮಾಧ್ಯಮಗಳ ಗಮನ ಸೆಳೆಯುವುದು ಮತ್ತು ಈ ಅವಕಾಶವನ್ನು ಬಳಸಿಕೊಂಡು ರಾಜಕೀಯ ಪ್ರಚಾರ ಮಾಡುವುದು ಇದರ ಹಿಂದಿರುವ ಏಕೈಕ ಉದ್ದೇಶವಾಗಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರದಿಂದಾಗಿ ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಎದುರಾಗಿದೆ. ಕೇಜ್ರಿವಾಲ್ ಅವರಿಗೆ ಬಹುಮತವಿದೆ ಮತ್ತು ಅವರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಹೀಗಿದ್ದರೂ, ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಶಾಸಕಾಂಗದ ಅಡಿಯಲ್ಲಿ ನೀಡಲಾದ ಸವಲತ್ತುಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ' ಎಂದು ದೂರಿದ್ದಾರೆ.

ಆದಾಗ್ಯೂ, ಭ್ರಷ್ಟಾಚಾರ ಮತ್ತು ದುರಾಡಳಿತದಿಂದಾಗಿ ಅವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂಬುದು ಖಚಿತವಾಗಿದೆ ಎಂದು ಅದು ಹೇಳಿದೆ.

2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆ  ಹಿನ್ನೆಲೆಯಲ್ಲಿ ಆಮ್​ ಆದ್ಮಿ ಪಕ್ಷದ ಶಾಸಕರನ್ನು ಬಿಜೆಪಿ ಆಪರೇಷನ್​ ಕಮಲ ಮಾಡಲು ಮುಂದಾಗಿದೆ ಎಂದು ಆರೋಪಿಸಿರುವ ಕೇಜ್ರಿವಾಲ್, ಹೀಗಾಗಿ ಸರ್ಕಾರದ ಸ್ಥಿರತೆ ಪರೀಕ್ಷಿಸಲು ತಾವೇ ವಿಶ್ವಾಸಮತಯಾಚನೆಗೆ ಮುಂದಾಗಿದ್ದಾರೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ 62 ಆಪ್​ ಶಾಸಕರಿದ್ದರೆ, 8 ಮಂದಿ ಬಿಜೆಪಿ ಸಾಸಕರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT