ಸಾಂದರ್ಭಿಕ ಚಿತ್ರ 
ದೇಶ

ರಾಷ್ಟ್ರೀಯ ಕ್ರೀಡಾ ದಿನ: ಮೇಜರ್ ಧ್ಯಾನ್ ಚಂದ್ ಜನ್ಮದಿನಾಚರಣೆ, ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ

ಇಂದು ಆಗಸ್ಟ್ 29 ರಂದು ಹಾಕಿ ಕ್ರೀಡಾ ಮಾಂತ್ರಿಕ, ಮೇಜರ್ ಧ್ಯಾನ್‌ಚಂದ್  ಸಿಂಗ್ (Major Dhyan Chand Singh) ಅವರ ಜನ್ಮದಿನ. ಈ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ (National sports day) ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ನವದೆಹಲಿ: ಇಂದು ಆಗಸ್ಟ್ 29 ರಂದು ಹಾಕಿ ಕ್ರೀಡಾ ಮಾಂತ್ರಿಕ, ಮೇಜರ್ ಧ್ಯಾನ್‌ಚಂದ್  ಸಿಂಗ್ (Major Dhyan Chand Singh) ಅವರ ಜನ್ಮದಿನ. ಈ ದಿನವನ್ನು ರಾಷ್ಟ್ರೀಯ ಕ್ರೀಡಾ ದಿನವನ್ನಾಗಿ (National sports day) ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ.

ಭಾರತೀಯ ಕ್ರೀಡಾ ಜಗತ್ತಿನಲ್ಲಿ ಇತ್ತೀಚಿನ ವರ್ಷಗಳು ಅತ್ಯಂತ ಮಹತ್ವದ್ದಾಗಿದೆ. ಈ ಸ್ಥಿತಿಗತಿ ಹಾಗೆಯೇ ಮುಂದುವರಿಯಲಿ. ದೇಶದಲ್ಲಿ ಕ್ರೀಡಾ ಜಗತ್ತು ಇನ್ನಷ್ಟು ಬೆಳಗಲಿ ಎಂದು ಹೇಳಿದ್ದಾರೆ.

ಭಾರತದ ಹಾಕಿ ಪಂದ್ಯದ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನಾಚಪಣೆ ಅಂಗವಾಗಿ ಕ್ರೀಡಾದಿನ ಆಚರಿಸಲಾಗುತ್ತದೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಆಗಸ್ಟ್ 29, 1905ರಲ್ಲಿ ಜನಿಸಿದ ಧ್ಯಾನ್ ಚಂದ್ ಹಾಕಿ ಜಗತ್ತಿನಲ್ಲಿ ಮೆರೆದು ಇತಿಹಾಸ ಸೃಷ್ಟಿಸಿದರು. 1936ರಲ್ಲಿ ಬರ್ಲಿನ್ ನಲ್ಲಿ ನಡೆದ ಒಲಿಂಪಿಕ್ ನಲ್ಲಿ ಚಿನ್ನ ಗೆದ್ದ ಭಾರತ ತಂಡದ ನಾಯಕರಾಗಿದ್ದರು. 

ಭಾರತದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕ್ರೀಡಾ ದಿನವನ್ನು 2012ರಲ್ಲಿ ಆಚರಿಸಲಾಯಿತು. ಈ ದಿನ ಕ್ರೀಡೆಯಲ್ಲಿ ಅದ್ವಿತೀಯ ಸಾಧನೆ ತೋರಿದ ಕ್ರೀಡಾಪಟುಗಳನ್ನು ರಾಷ್ಟ್ರಪತಿಗಳು ಗೌರವಿಸುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT