ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 5,439 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,44,21,162ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳು 65,732ಕ್ಕೆ ಇಳಿಕೆಯಾಗಿವೆ ಎಂದು ಮಂಗಳವಾರ ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ 0.15 ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಚೇತರಿಕೆ ದರವು ಶೇ 98.66ರಷ್ಟಿದೆ. ಈವರೆಗೆ 4,38,25,024 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇ 1.70ರಷ್ಟಿದ್ದರೆ, ಮರಣ ಪ್ರಮಾಣ ಶೇ 1.19ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ 1.70ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಇನ್ನು ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ ಕೋವಿಡ್ ವಿರುದ್ಧದ 212.71 ಕೋಟಿ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.