ದೇಶ

ಅಮಾನ್ಯಗೊಂಡ ನೋಟುಗಳ ಬದಲು ಮಾಡಲು ಸಿಬ್ಬಂದಿಗಳಿಗೆ ಲೆಫ್ಟಿನೆಂಟ್ ಗೌರ್ನರ್ ಒತ್ತಡ: ಆಪ್ ಆರೋಪ

Srinivas Rao BV

ನವದೆಹಲಿ: ಅಮಾನ್ಯಗೊಂಡ ನೋಟುಗಳನ್ನು ಬದಲಾವಣೆ ಮಾಡುವಂತೆ ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಸಿಬ್ಬಂದಿಗಳಿಗೆ ಒತ್ತಡ ಹಾಕಿದ್ದರು ಎಂದು ಆಮ್ ಆದ್ಮಿ ಪಕ್ಷದ ಶಾಸಕ ದುರ್ಗೇಶ್ ಪಾಠಕ್ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. 

ಈಗ ಲೆಫ್ಟಿನೆಂಟ್ ಗೌರ್ನರ್ ಆಗಿರುವ ವಿಕೆ ಸಕ್ಸೇನಾ 2016 ರಲ್ಲಿ ಕೆವಿಐಸಿ ಅಧ್ಯಕ್ಷರಾಗಿದ್ದಾಗ 1,400 ಕೋಟಿ ರೂಪಾಯಿ ಮೌಲ್ಯದ ಅಮಾನ್ಯಗೊಂಡ ನೋಟುಗಳನ್ನು ಬದಲಾವಣೆ ಮಾಡುವಂತೆ, ಒತ್ತಡ ಹಾಕಿದ್ದರು ಎಂದು ಆರೋಪಿಸಿದ್ದಾರೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗೌರ್ನರ್ ನಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆಯೂ ಬಂದಿಲ್ಲ. ಈಗ ಈ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಕೇಜ್ರಿವಾಲ್ ಸರ್ಕಾರದ ಹೊಸ ಮದ್ಯ ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದ ಲೆಫ್ಟಿನೆಂಟ್ ಗೌರ್ನರ್ ಹಾಗೂ ಆಡಳಿತ ಪಕ್ಷದ ನಡುವಿನ ಸಂಬಂಧವನ್ನು ಮತ್ತಷ್ಟು ಹದಗೆಡಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

SCROLL FOR NEXT