ದೇಶ

ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ದೆಹಲಿ ಲೆಫ್ಟಿನೆಂಟ್ ಗವರ್ನರ್

Lingaraj Badiger

ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಅವರು ತಮ್ಮ ವಿರುದ್ಧದ "ಸುಳ್ಳು" ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ಎಎಪಿ ಶಾಸಕರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ದುರ್ಗೇಶ್ ಪಾಠಕ್ ಸೇರಿದಂತೆ ಇತರ ಎಎಪಿ ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಕ್ಸೆನಾ ಅವರು ತಾವು 2016ರಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧ್ಯಕ್ಷರಾಗಿದ್ದಾಗ 1400 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಎಎಪಿ ನಾಯಕರ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ದೆಹಲಿಯ ಸಂವಾದ ಮತ್ತು ಅಭಿವೃದ್ಧಿ ಆಯೋಗದ ಉಪಾಧ್ಯಕ್ಷರಾಗಿರುವ ಜಾಸ್ಮಿನ್ ಶಾ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ತಿಂಗಳು ಕೇಜ್ರಿವಾಲ್ ಸರ್ಕಾರದ ಅಬಕಾರಿ ನೀತಿಯಲ್ಲಿನ ಅಕ್ರಮಗಳ ಬಗ್ಗೆ ಸಿಬಿಐ ತನಿಖೆಗೆ ಸಕ್ಸೆನಾ ಶಿಫಾರಸು ಮಾಡಿದ ನಂತರ ಆಡಳಿತ ಪಕ್ಷ ಮತ್ತು ಲೆಫ್ಟಿನೆಂಟ್ ಗವರ್ನರ್ ನಡುವೆ ಜಿದ್ದಾಜಿದ್ದಿ ಆರಂಭವಾಗಿದೆ.

SCROLL FOR NEXT