ಸಾಂದರ್ಭಿಕ ಚಿತ್ರ 
ದೇಶ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ವ್ಯಕ್ತಿ ಬಂಧನ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಲ್ಲಿಯಾ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಬಂಧಿತನನ್ನು ನರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟ್ ಮಜಾರಿಯಾ ಗ್ರಾಮದ ನಿವಾಸಿ ಸುರೇಂದ್ರ ಯಾದವ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯಾದವ್ ಅವರು ಸೋಮವಾರ ಟ್ವಿಟರ್‌ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಪೋಸ್ಟ್ ಮಾಡಿದ್ದರು. ಈ ಸಂಬಂಧ ಅಖಿಲ ಭಾರತ ಕ್ಷತ್ರಿಯ ಮಂಚ್ ಉಸ್ತುವಾರಿ ಬ್ರಿಜೇಶ್ ಸಿಂಗ್ ಅವರು ಮಂಗಳವಾರ ದೂರು ದಾಖಲಿಸಿದ್ದಾರೆ ಎಂದು ನರ್ಹಿ ಪೊಲೀಸ್ ಠಾಣೆ ಉಸ್ತುವಾರಿ ಪನ್ನೆ ಲಾಲ್ ತಿಳಿಸಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಲಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT