ಪ್ರಾತಿನಿಧಿಕ ಚಿತ್ರ 
ದೇಶ

ಗರ್ಭ ಧರಿಸಿದ್ದ ಹಸು ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು

ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ನಮ್‌ಖಾನಾ ಬ್ಲಾಕ್‌ನ ಉತ್ತರ ಚಂದನ್‌ಪಿಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ 29 ವರ್ಷದ ಯುವಕನನ್ನು ಬುಧವಾರ ಬಂಧಿಸಲಾಗಿದೆ.

ಕೋಲ್ಕತ್ತಾ: ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ 24 ಪರಗಣ ಜಿಲ್ಲೆಯ ನಮ್‌ಖಾನಾ ಬ್ಲಾಕ್‌ನ ಉತ್ತರ ಚಂದನ್‌ಪಿಡಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ 29 ವರ್ಷದ ಯುವಕನನ್ನು ಬುಧವಾರ ಬಂಧಿಸಲಾಗಿದೆ.

ಈ ಸಂಬಂಧ ಹಸುವಿನ ಮಾಲೀಕರು ನೀಡಿರುವ ದೂರಿನ ಮೇರೆಗೆ ಆರೋಪಿ ಪ್ರದ್ಯುತ್ ಭುಯಾನನ್ನು ಬಂಧಿಸಲಾಗಿದೆ.

ಸ್ಥಳೀಯರು ಮತ್ತು ಪೊಲೀಸರ ಪ್ರಕಾರ, ಉತ್ತರ ಚಂದನಪಿಡಿ ನಿವಾಸಿ ಆರತಿ ಭುಯಾ ಮತ್ತು ಅವರ ಕುಟುಂಬವು, ಕೆಲ ದಿನಗಳ ಹಿಂದೆ ಅವರ ನೆರೆಹೊರೆಯವನಾಗಿದ್ದ ಪ್ರದ್ಯುತ್ ತಮ್ಮ ಮನೆಯ ದನದ ಕೊಟ್ಟಿಗೆಗೆ ತೆರಳಿ ತಮ್ಮ ಹಸುವಿನ ಮೇಲೆ 'ಕ್ರೂರವಾಗಿ ಅತ್ಯಾಚಾರ' ಮಾಡಿದ್ದಾರೆ ಎಂದು ದೂರಿದ್ದರು.

'ಅತ್ಯಾಚಾರಕ್ಕೊಳಗಾದ ನಂತರ ಮಧ್ಯರಾತ್ರಿ ಸುಮಾರಿಗೆ ಅತಿಯಾದ ರಕ್ತಸ್ರಾವದಿಂದ ಹಸು ಮೃತಪಟ್ಟಿದೆ' ಎಂದು ದೂರುದಾರರು ತಿಳಿಸಿದ್ದಾರೆ.

ಆರೋಪಿ ಪ್ರದ್ಯುತ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಂತರ ಮಂಗಳವಾರ ಕಾಕದ್ವೀಪ ಉಪವಿಭಾಗೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

'ಪ್ರದ್ಯುತ್ ವಿರುದ್ಧ ಲೆಕ್ಕವಿಲ್ಲದಷ್ಟು ಆರೋಪಗಳಿವೆ. ಈತ ಈ ಹಿಂದೆ ಮೇಕೆಗಳು, ವಾಹನಗಳು ಮತ್ತು ಹೊಲಗಳಲ್ಲಿ ತರಕಾರಿಗಳನ್ನು ಕಳ್ಳತನ ಮಾಡಿದ್ದನು' ಎಂದು ಚಂದನಪಿಡಿ ಗ್ರಾಮದ ನಿವಾಸಿಯೊಬ್ಬರು. ಈತನ ಅಮಾನವೀಯ ಕೃತ್ಯಕ್ಕೆ ತಕ್ಕ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ