ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿರುವ ಜನ 
ದೇಶ

ಗುಜರಾತ್ ಚುನಾವಣೆ: ಮಧ್ಯಾಹ್ನ 3 ಗಂಟೆಯವರೆಗೆ ಶೇ.48.48ರಷ್ಟು ಮತದಾನ

ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ.48.48ರಷ್ಟು ಮತದಾನವಾಗಿದೆ.

ಅಹಮದಾಬಾದ್: ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ.48.48ರಷ್ಟು ಮತದಾನವಾಗಿದೆ.

ಇಂದು ಬೆಳಗ್ಗೆ 8 ಗಂಟೆಯಿಂದ ಬಿಗಿ ಭದ್ರತೆಯೊಂದಿಗೆ ಮತದಾನ ಆರಂಭವಾಗಿದ್ದು, ಮಧ್ಯಾಹ್ನ 3 ಗಂಟೆಯವರೆಗೆ ಶೇ.48.48ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ 27 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಈಗ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಹೋರಾಟ ನಡೆಸುತ್ತಿದೆ.

ಮೊದಲ ಹಂತದಲ್ಲಿ, ಸೌರಾಷ್ಟ್ರ-ಕಚ್ ಪ್ರದೇಶ ಮತ್ತು ದಕ್ಷಿಣ ಭಾಗಗಳು ಸೇರಿದಂತೆ ಒಟ್ಟು 19 ಜಿಲ್ಲೆಗಳ 89 ವಿಧಾನಸಭಾ ಕ್ಷೇತ್ರಳಲ್ಲಿ ಇಂದು ಮತದಾನ ನಡೆಯುತ್ತಿದೆ. ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 89 ಸ್ಥಾನಗಳಲ್ಲಿ ಸ್ಪರ್ಧಿಸುದ್ದು, ಹೊಸದಾಗಿ ಎಂಟ್ರಿಕೊಟ್ಟಿರುವ ಎಎಪಿ 88 ಸ್ಥಾನಗಳಲ್ಲಿ ಸ್ಪರ್ಧಿಸಿದೆ. 339 ಪಕ್ಷೇತರ ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!