ಮತದಾರರು 
ದೇಶ

ಗುಜರಾತ್ ಚುನಾವಣೆ: ಮೊದಲನೆ ಹಂತದ ಮತದಾನ ಮುಕ್ತಾಯ, ಶೇ.59.24 ರಷ್ಟು ಮತದಾನ

ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲನೆ ಹಂತದ ಮತದಾನ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು,  ಸಂಜೆ 5 ಗಂಟೆಯವರೆಗೆ ಶೇ. 59.24 ರಷ್ಟು ಮತದಾನವಾಗಿದೆ.

ಅಹಮದಾಬಾದ್: ಗುಜರಾತ್‌ ವಿಧಾನಸಭೆ ಚುನಾವಣೆಯ ಮೊದಲನೆ ಹಂತದ ಮತದಾನ ಪ್ರಕ್ರಿಯೆ ಗುರುವಾರ ಮುಕ್ತಾಯಗೊಂಡಿದ್ದು,  ಸಂಜೆ 5 ಗಂಟೆಯವರೆಗೆ ಶೇ. 59.24 ರಷ್ಟು ಮತದಾನವಾಗಿದೆ.

ಇಂದು ಬೆಳಗ್ಗೆ 8 ಗಂಟೆಯಿಂದ ಬಿಗಿ ಭದ್ರತೆಯೊಂದಿಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಶೇ.59.24 ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ 27 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಈಗ ಮತ್ತೆ ಅಧಿಕಾರಕ್ಕೆ ಬರಲು ತೀವ್ರ ಹೋರಾಟ ನಡೆಸುತ್ತಿದೆ.

ಮೊದಲ ಹಂತದಲ್ಲಿ, ಸೌರಾಷ್ಟ್ರ-ಕಚ್ ಪ್ರದೇಶ ಮತ್ತು ದಕ್ಷಿಣ ಭಾಗಗಳು ಸೇರಿದಂತೆ ಒಟ್ಟು 19 ಜಿಲ್ಲೆಗಳ 89 ವಿಧಾನಸಭಾ ಕ್ಷೇತ್ರಳಲ್ಲಿ ಇಂದು ಮತದಾನ ನಡೆದಿದ್ದು, ಒಟ್ಟು 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲಾ 89 ಸ್ಥಾನಗಳಲ್ಲಿ ಸ್ಪರ್ಧಿಸುದ್ದು, ಹೊಸದಾಗಿ ಎಂಟ್ರಿಕೊಟ್ಟಿರುವ ಎಎಪಿ 88 ಸ್ಥಾನಗಳಲ್ಲಿ ಸ್ಪರ್ಧಿಸಿದೆ. 339 ಪಕ್ಷೇತರ ಅಭ್ಯರ್ಥಿಗಳು ಸಹ ಕಣದಲ್ಲಿದ್ದಾರೆ.

ಚುನಾವಣೆಯಲ್ಲಿ ಕೇವಲ 70 ಮಹಿಳಾ ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದು,  ಬಿಜೆಪಿಯಿಂದ ಒಂಬತ್ತು, ಕಾಂಗ್ರೆಸ್‌ನಿಂದ ಆರು ಮತ್ತು ಎಎಪಿಯಿಂದ ಐವರು ಸ್ಪರ್ಧಿಸಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

SCROLL FOR NEXT