ದೇಶ

ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದಾಗಲೆಲ್ಲ ಗುಜರಾತ್ ಮತದಾರರು ತಕ್ಕ ಉತ್ತರ ನೀಡಿದ್ದಾರೆ: ಅಮಿತ್ ಶಾ

Lingaraj Badiger

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅನುಚಿತ ಪದಗಳನ್ನು ಬಳಸಿ ವಾಗ್ದಾಳಿ ನಡೆಸಿದಾಗಲೆಲ್ಲ ಗುಜರಾತ್ ಮತದಾರರು ತಕ್ಕ ಉತ್ತರ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.

ಅಹಮದಾಬಾದ್‌ನ ಸನಂದ್‌ನಲ್ಲಿ ರೋಡ್‌ಶೋ ನಡೆಸುತ್ತಿದ್ದ ವೇಳೆ ಕಾಂಗ್ರೆಸ್‌ನ "ರಾವಣ" ಹೇಳಿಕೆಗೆ ಪ್ರತಿಕ್ರಿಯಿಸಿದ ಅಮಿತ್ ಶಾ, ಮೋದಿ ವಿರುದ್ಧ ಅನುಚಿತ ಪದಗಳನ್ನು ಬಳಸಿದಾಗಲೆಲ್ಲಾ ಗುಜರಾತ್‌ ಜನ ಮತ ಪೆಟ್ಟಿಗೆಯ ಮೂಲಕ ಕಾಂಗ್ರೆಸ್‌ಗೆ ಪ್ರತ್ಯುತ್ತರ ನೀಡಿದ್ದಾರೆ. ಈ ಬಾರಿಯೂ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ ಎಂದರು.

ನರೇಂದ್ರ ಮೋದಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಜನರ ಹಲವು ಮೂಲಭೂತ ಸಮಸ್ಯೆಗಳನ್ನು ಪರಿಹರಿಸಿದ್ದರು. ನರೇಂದ್ರ ಮೋದಿ ಸಿಎಂ ಆಗಿದ್ದಾಗ ಗುಜರಾತ್‌ನಲ್ಲಿ ವಿವಿಧ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಅಮಿತ್ ಶಾ ಹೇಳಿದರು.

ಗುಜರಾತ್ ನ 182 ಕ್ಷೇತ್ರಗಳ ಪೈಕಿ 89 ಕ್ಷೇತ್ರಗಳಿಗೆ ಇಂದು ಮೊದಲ ಹಂತದ ಮತದಾನ ನಡೆಯುತ್ತಿರುವ ಸಂದರ್ಭದಲ್ಲೇ ಕೇಂದ್ರ ಗೃಹ ಸಚಿವರು ರೋಡ್‌ಶೋ ನಡೆಸುತ್ತಿದ್ದಾರೆ. ರೋಡ್‌ಶೋನಲ್ಲಿ ನೂರಾರು ಜನ ಭಾಗವಹಿಸಿದ್ದರು.

SCROLL FOR NEXT