ದೇಶ

ಅಕ್ರಮ ಹಣ ವರ್ಗಾವಣೆ ಪ್ರಕರಣ: ಛತ್ತೀಸ್‌ಗಢ ಸಿಎಂ ಬಘೇಲ್ ಉಪ ಕಾರ್ಯದರ್ಶಿ ಬಂಧನ

Lingaraj Badiger

ರಾಯ್‌ಪುರ: ಕಲ್ಲಿದ್ದಲು ಲೆವಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಸೌಮ್ಯಾ ಚೌರಾಸಿಯಾ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಬಂಧಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ರಾಜ್ಯದ ಪ್ರಬಲ ಅಧಿಕಾರಿ ಎಂದು ಪರಿಗಣಿಸಲ್ಪಟ್ಟ ಚೌರಾಸಿಯಾ ಅವರನ್ನು ವಿಚಾರಣೆಗೆ ಒಳಪಡಿಸಿದ ನಂತರ ಹಣ ವರ್ಗಾವಣೆ ತಡೆ ಕಾಯ್ದೆಯ(ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಇಡಿ ಕಸ್ಟಡಿಗೆ ತೆಗೆದುಕೊಂಡಿದೆ.

ಬಂಧನದ ನಂತರ ಅಧಿಕಾರಿಯನ್ನು ಆರೋಗ್ಯ ತಪಾಸಣೆಗಾಗಿ ಕರೆದೊಯ್ಯಲಾಯಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಹಲವಾರು ದಾಳಿಗಳನ್ನು ನಡೆಸಿದ ನಂತರ ಕಳೆದ ಅಕ್ಟೋಬರ್‌ನಲ್ಲಿ ರಾಜ್ಯದ ಐಎಎಸ್ ಅಧಿಕಾರಿ ಸಮೀರ್ ವಿಷ್ಣೋಯ್ ಮತ್ತು ಇತರ ಇಬ್ಬರನ್ನು ಬಂಧಿಸಿತ್ತು.

ಛತ್ತೀಸ್‌ಗಢದಲ್ಲಿ ಕಾರ್ಟೆಲ್‌ನಿಂದ ಸಾಗಿಸಲ್ಪಟ್ಟ ಪ್ರತಿ ಟನ್ ಕಲ್ಲಿದ್ದಲಿಗೆ 25 ರೂಪಾಯಿ ಅಕ್ರಮವಾಗಿ ಸುಲಿಗೆ ಮಾಡಲಾದ ಹಗರಣಕ್ಕೆ ಸಂಬಂಧಿಸಿದಂತೆ 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(PMLA) ಅಡಿಯಲ್ಲಿ ಇಡಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತ್ತು.

SCROLL FOR NEXT